Transport Employees: ಸಾರಿಗೆ ನೌಕರರಿಗೆ ಗುಡ್‌ನ್ಯೂಸ್, ಹಬ್ಬಕ್ಕು ಮುನ್ನವೇ ₹170 ಕೋಟಿ ವೇತನ ಬಿಡುಗಡೆ
ಬೆಂಗಳೂರು: ವೇತನ ಪರಿಷ್ಕರಣೆ, ಹಿಂಬಾಕಿ ಬಿಡುಗಡೆಗೆ ನಿರಂತರವಾಗಿ ಆಗ್ರಹಿಸಿದ್ದ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಸ್ವಾತಂತ್ರೋತ್ಸವ ಮುನ್ನಾದಿನ ಹಾಗೂ ವರಮಹಾಲಕ್ಷ್ಮೀ ಹಬ್ಬಕ್ಕು ಮೊದಲೇ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ನೌಕರರ ಬಾಕಿ ಇರುವ ಒಟ್ಟು ವೇತನದ ಪೈಕಿ 170 ಕೋಟಿ ರೂ. ಶುಕ್ರವಾರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಇಂದಿನ ವಿವಿಧ ಕಾರ್ಮಿಕ ಸಂಘಟನೆಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಂದ ವೇತನ ಬಿಡುಗಡೆ ಕುರಿತು ಘೋಷಿಸಿದರು. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿ ಅವರಿಂದ ಅನುಮತಿ ಪಡೆದೇ ಹಣ ಬಿಡುಗಡೆಗೆ ನಿರ್ಧರಿಸಲಾಗಿದೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದರು.

ರಾಜ್ಯ ಸರ್ಕಾರ 2025 ರಲ್ಲಿ ವೇತನ ಪರಿಷ್ಕರಣೆ ಮಾಡಿದ್ದರಿಂದ 1221 ಕೋಟಿ ರೂಪಾಯಿಗಳನ್ನು ನೌಕರರಿಗೆ ಪಾವತಿಸ ಬೇಕಿದ್ದು, ಅದರಲ್ಲಿ 450 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ. ಇನ್ನೂ 821 ಕೋಟಿ ರೂಪಾಯಿಗಳು ಬಾಕಿ ಇದ್ದ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಲಾಗಿದ್ದು, ತಕ್ಷಣವೇ 170 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಒಪ್ಪಿದ್ದಾರೆ. ಅದರಂತೆ ಹಣ ಬಿಡುಗಡೆ ಆಗಿದೆ ಎಂದು ತಿಳಿಸಿದರು.
ವೇತನ ಪರಿಷ್ಕರಣೆಯನ್ನು ಇನ್ನೂ 12 ತಿಂಗಳು ವಿಸ್ತರಿಸ ಬೇಕು, ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡುವುದು ಮತ್ತು ಹಲವು ವರ್ಷಗಳಿಂದ ಬಾಕಿ ಇರುವ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸುವುದು ಸೇರಿದಂತೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ನಡೆಯುತ್ತಿರುವ ಅಧಿವೇಶನ ನಂತರ ಸಿಎಂ ಜೊತೆಗೆ ಸಾರಿಗೆ ನೌಕರರ ಬೇಡಿಕೆ ಸಂಬಂಧ ಸಭೆ ನಡೆಸಲಾಗುವುದು ಎಂದ ಹೇಳಿದರು.
ಸಾರಿಗೆ ನೌಕರರಿಗೆ ಆರೋಗ್ಯ ವಿಮೆ
KSRTC ಸಂಸ್ಥೆ ತನ್ನ ಸಿಬ್ಬಂದಿ ಮತ್ತು ನೌಕರರಿಗೆ ಆರೋಗ್ಯ ವಿಮೆ ಜಾರಿಗೆ ತಂದಿದೆ. ವಿಮೆ ಹಣವನ್ನು ಸಹ ಈ ಹಿಂದೆ ಹೆಚ್ಚಿಸಿದೆ. ಇದೆ ರೀತಿ ಇನ್ನುಳಿದ ಮೂರು ಸಾರಿಗೆ ಸಂಸ್ಥೆಗಳ ನೌಕರರಿಗೂ ಆರೋಗ್ಯ ವಿಮಾ ಯೋಜನೆ ಜಾರಿಗೆ ತರಲಾಗುವುದು ಎಂದು ಘೋಷಿಸಿದರು.
ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವಾರ್ಷಿಕ 500 ರೂಪಾಯಿ ಪಡೆದು ಬಸ್ ಪಾಸ್ ವಿತರಿಸಲಾಗುತ್ತಿತ್ತು. ಇನ್ನೂ ಮುಂದೆ ಉಚಿತವಾಗಿ ಬಸ್ ಪಾಸ್ ವಿತರಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಪ್ರಯಾಣ ದರ ಹೆಚ್ಚಳ ಮಾಡಿದ ನಂತರ 9 ಕ್ಕೂ ಹೆಚ್ಚು ಬಾರಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಆದಾಗ್ಯೂ, ಸರ್ಕಾರಿ ಸ್ವಾಮ್ಯದ ಬಸ್ ಗಳ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ನಿಗಮಗಳಿಗೆ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗುತ್ತಿದೆ ಎಂದು ತಿಳಿಸಿದರು.
ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆಯಾಗಿದೆ. ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ಸಮಿತಿ ವರದಿ ನೀಡಿದ ಬಳಿಕ ಅದನ್ನು ಸರ್ಕಾರ ಮಟ್ಟದಲ್ಲಿ ಚರ್ಚಿಸಿ ಹೊರೆ ಆಗದಂತೆ ದರ ಏರಿಕೆ ಕುರಿತು ತೀರ್ಮಾನಿಸಲಾಗುವುದು.
4500 ಬಸ್ ಸೇರ್ಪಡೆ
ಎಲೆಕ್ಟ್ರಿಕ್ ಬಸ್ ಗಳನ್ನು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ಸಂಚರಿಸಲಿವೆ. ಈಗಾಗಲೇ ನಿರ್ಧರಿಸಿದಂತೆ ಪಿಎಂ ಯೋಜನೆಯಡಿ ಕೇಂದ್ರ ಸರ್ಕಾರದಿಂದ 4500 ಬಸ್ ಗಳನ್ನು ಪಡೆಯಲಾಗುವುದು. ಮುಖ್ಯವಾಗಿ ಎಲ್ಲ ಸಂಸ್ಥೆಗಳಿಗೂ ಶಕ್ತಿ ಯೋಜನೆಯ ಟಿಕೆಟ್ ಹಣ ನೀಡಲಾಗುವುದು ಎಂದು ಹೇಳಿದರು.


Click it and Unblock the Notifications
