ಸಾರಿಗೆ ನೌಕರರ ಮುಷ್ಕರ ಅಂತ್ಯ, ಬಸ್ ಬಂತು ಹತ್ತಿಕೊಳ್ಳಿ
ಬೆಂಗಳೂರು, ಜುಲೈ 27 : ಮೂರು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಅಂತ್ಯಗೊಂಡಿದೆ. ಶೇ 12.5ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ನೌಕರರು ಮುಷ್ಕರವನ್ನು ವಾಪಸ್ ಪಡೆದರು.
ಬುಧವಾರ ಸಂಜೆ ಕೆಎಸ್ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಎಐಟಿಯುಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತ ಸುಬ್ಬರಾವ್ ಮತ್ತು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.[ಸಾರಿಗೆ ನೌಕರರ ಮುಷ್ಕರ : ಬುಧವಾರ ಏನಾಯ್ತು?]

'ತಕ್ಷಣದಿಂದಲೇ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ, ಎಲ್ಲಾ ನೌಕರರು ಮುಷ್ಕರ ಅಂತ್ಯಗೊಳಿಸಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ' ಎಂದು ಎಚ್.ವಿ.ಅನಂತ ಸುಬ್ಬರಾವ್ ಹೇಳಿದರು.[ಚಿತ್ರಗಳು : ಹುಬ್ಬಳ್ಳಿಯಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ]
'ಸರ್ಕಾರ ಶೇ 12.5 ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ನಮ್ಮ ಉಳಿದ ಬೇಡಿಕೆಗಳನ್ನು ಈಡೇರಿಸಲು 20 ದಿನಗಳ ಗಡುವು ಕೇಳಿದೆ. ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತುಕತೆ ನಡೆಸಿ ಅದನ್ನು ಬಗೆಹರಿಸಿಕೊಳ್ಳುತ್ತೇವೆ' ಎಂದರು ತಿಳಿಸಿದರು.
'ಮೂರು ದಿನದ ಮುಷ್ಕರದ ವೇಳೆ ಹಲವು ನೌಕರರಿಗೆ ಶಿಸ್ತು ಕ್ರಮದ ಹೆಸರಿನಲ್ಲಿ ನೋಟಿಸ್ ನೀಡಲಾಗಿದೆ. ಅದು ನಮ್ಮ ಪಾಲಿಗೆ ಅಶಿಸ್ತಿನ ಕ್ರಮವಾಗಿದೆ. ಇದನ್ನು ವಾಪಸ್ ಪಡೆಯಬೇಕು ಎಂದು ಬೇಡಿಕೆ ಮುಂದಿಟ್ಟಿದ್ದೇವೆ. ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ' ಎಂದರು.
ಮುಷ್ಕರ ಅಂತ್ಯಗೊಂಡ ತಕ್ಷಣ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸುಗಳ ಸಂಚಾರ ಆರಂಭವಾಗಿದೆ. ಯಶವಂತಪುರ-ಮೆಜೆಸ್ಟಿಕ್, ಶಾಂತಿನಗರ-ಶಿವಾಜಿನಗರ, ಶಾಂತಿನಗರ-ಮೆಜೆಸ್ಟಿಕ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಬಸ್ ಸಂಚಾರ ಆರಂಭವಾಗಿದೆ.












Click it and Unblock the Notifications