ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕವಾಗಿ ಅಂತ್ಯ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಏಪ್ರಿಲ್ 21: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗಿದೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಇಂದು ಘೋಷಿಸಿದ್ದಾರೆ. ಆದರೆ, ಇದು ತಾತ್ಕಾಲಿಕ ಮಾತ್ರ, ಬೇಡಿಕೆ ಈಡೇರುವ ತನಕ ಮುಷ್ಕರ ಮುಂದುವರೆಯಲಿದ್ದು, ಈ ಬಗ್ಗೆ ನಂತರ ತಿಳಿಸಲಾಗುವುದು ಎಂದಿದ್ದಾರೆ.

ಕಳೆದ 15ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದ ನೌಕರರು, ಹೈಕೋರ್ಟ್ ಆದೇಶದಂತೆ ಮುಷ್ಕರ ಅಂತ್ಯಗೊಳಿಸಿದ್ದಾರೆ.

ಕೊರೊನಾ ಮಿತಿಮೀರಿ ಹೋಗುತ್ತಿರುವ ಸಂದರ್ಭದಲ್ಲಿ ಮುಷ್ಕರ ಬೇಡ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದರು.

Karnataka Transport Employees Strike Called Off After 15 Days: Kodihalli Chandrashekar

ಬೊಮ್ಮಾಯಿ ಜೊತೆಗಿನ ಮಾತುಕತೆಯ ನಂತರ ನೌಕರರಿಗೆ ಶೇ.10ರಷ್ಟು ವೇತನ ಹೆಚ್ಚಾಗಲಿದೆ. ಆರನೇ ವೇತನ ಆಯೋಗದ ಶಿಫಾರಸಿನ ಬಗ್ಗೆ ಸಿಎಂ ಮತ್ತು ಸಾರಿಗೆ ಸಚಿವರ ಜೊತೆ ಮಾತುಕತೆ ನಡೆಸಿ, ಜಾರಿಗೊಳಿಸುವ ಬಗ್ಗೆ ಬೊಮ್ಮಾಯಿಯವರು ಭರವಸೆ ನೀಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದರು.

ಆದರೆ, "ಅಂಥ ಯಾವ ಭರವಸೆಯನ್ನು ಸರ್ಕಾರ ನೀಡಿಲ್ಲ"ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದರು. ಈ ಎಲ್ಲಾ ಗೊಂದಲಗಳ ನಡುವೆ ನಾಳೆಯಿಂದ ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತರ ಮುಷ್ಕರ ಮತ್ತೊಮ್ಮೆ ಆರಂಭವಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+