ಬಿಜೆಪಿ ನಾಯಕರ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಉತ್ತರ!
ಬಿಜೆಪಿ ನಾಯಕರು ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ಗಳ ಅವಸ್ಥೆ ಬಗ್ಗೆ ಮಾಡಿರುವ ಗಂಭೀರ ಆರೋಪಕ್ಕೆ ಇದೀಗ ಖುದ್ದು ಸಾರಿಗೆ ಸಚಿವರೇ ಉತ್ತರ ನೀಡಿದ್ದಾರೆ. ಇದರ ಜೊತೆಗೆ, ಇದು ಸುಳ್ಳು ಸುದ್ದಿ ಎಂಬ ಆರೋಪ ಕೂಡ ಮಾಡಿ, ಬಿಜೆಪಿ ನಾಯಕರಿಗೆ ಖಡಕ್ ಪ್ರತ್ಯುತ್ತರವನ್ನ ನೀಡಿದ್ದಾರೆ.
ರಾಜ್ಯದಲ್ಲಿ ಮಳೆಗಾಲ ಆರಂಭವಾದ ನಂತರ ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ಗಳು ಸೋರಿಕೆ ಆಗುತ್ತಿವೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಆದರೆ ಈ ಕುರಿತು ಇದೀಗ, ಕರ್ನಾಟಕ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಖಡಕ್ ಉತ್ತರ ನೀಡಿದ್ದು, ಈ ಬಗ್ಗೆ ಸುದೀರ್ಘ ಟ್ವೀಟ್ ಮಾಡಿದ್ದಾರೆ. ಆ ಟ್ವೀಟ್‌ನಲ್ಲಿ ಏನಿದೆ ಅನ್ನೋದನ್ನ ತಿಳಿಯೋಣ ಬನ್ನಿ.

ಬಿಜೆಪಿ ನಾಯಕರಿಗೆ ಪ್ರತ್ಯುತ್ತರ!
ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಟ್ವೀಟ್ ಮಾಡಿ, 'ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ ವಿಡಿಯೋ ಕುರಿತು) @BJP4Karnataka ದವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ.'
'ಕೆಲವರಿಗೆ ಕಣ್ಣಿರುತ್ತದೆ ಆದರೆ ನೋಡಲು ಸಾಧ್ಯವಾಗದ ಸ್ಥಿತಿ, ತಲೆ ಇರುತ್ತದೆ ಬುದ್ದಿಯನ್ನು ಸರಿಯಾಗಿ ಉಪಯೋಗಿಸಲಾಗದ ಪರಿಸ್ಥಿತಿ, ಇವೆಲ್ಲವೂ ಅನ್ವಯಿಸುವುದು @BasanagoudaBJP, @RAshokaBJP, @drashwathcn ಹಾಗೂ ಬಿ.ಜೆ.ಪಿ ಕಣ್ಣು, ತಲೆ ಯಾವುದೂ ಸರಿಯಾಗಿ ಕನೆಕ್ಟ್ ಆಗದೆ ಇರೋ ಪಂಡಿತ ಪುತ್ರರು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.'
ಕೊಡೆ ಮೇಲೆ ಒಂದು ಹನಿ...
'ಈ ವಿಡಿಯೋ ನೋಡಿದರೆ ಚಾಲಕ ಹಿಡಿದಿರುವ ಕೊಡೆ ಮೇಲೆ ಒಂದೇ ಒಂದು ಹನಿ ನೀರು ಕಾಣುತ್ತಿಲ್ಲ ಅದನ್ನು ನೋಡುವ, ಯೋಚಿಸುವ ವ್ಯವಧಾನ, ಬುದ್ದಿಯಾದರೂ ಬೇಡವೇ ಇವರಿಗೆ ? ಬಿ.ಜೆ.ಪಿ ಅವಧಿಯಲ್ಲಿ ರಾಜ್ಯದ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ಸಾಲದ ಸುಳಿಯಲ್ಲಿ ಮುಳುಗಿಸಿ ಹೋಗಿರುವ ಕೀರ್ತಿವಂತರು ಇವರು. ಅವರ ಅವಧಿಯಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿಲ್ಲ. ಡಕೋಟ ಬಸ್ಸುಗಳನ್ನು ಕಲ್ಪಿಸಿರುವ ಸಾಧನೆ ಅವರದ್ದೇ..'
'ನೇಮಕಾತಿಯಂತೂ ಮರೀಚಿಕೆಯೇ ಸರಿ.. ನಮ್ಮ ಅವಧಿಯಲ್ಲಿ ಹೊರಡಿಸಿದ್ದ ನೇಮಕಾತಿ ಪ್ರಕಟಣೆಗೂ ತಡೆ ನೀಡಿದ್ದ ಕೀರ್ತಿ ಬಿ.ಜೆ.ಪಿ ಅವರಿಗೆ ಸಲ್ಲಬೇಕು. ನಮ್ಮ ಸರ್ಕಾರ ಬಂದೊಡನೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಚಾಲನೆ ನೀಡಿದೆ. ಬಿ.ಜೆ.ಪಿ ಅವಧಿಯಲ್ಲಿ ತಡೆ ಹಿಡಿಯಲಾಗಿದ್ದ ನೇಮಕಾತಿಗೆ ಚಾಲನೆ ನೀಡಲಾಗಿದೆ. 13999 ಹುದ್ದೆಗಳು ಖಾಲಿಯಿದ್ದು, ತಾಂತ್ರಿಕ ಸಿಬ್ಬಂದಿ ಹಾಗೂ ಚಾಲಕ ನಿರ್ವಾಹಕರಿಗೆ ನೇಮಕಾತಿ ಪತ್ರವನ್ನು ವಿತರಿಸಲಾಗಿದೆ. ಇತರೆ ನೇಮಕಾತಿ ಪ್ರಕ್ರಿಯೆಗಳು ಜಾರಿಯಲ್ಲಿವೆ.'
ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ ವಿಡಿಯೋ ಕುರಿತು) @BJP4Karnataka ದವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ.… pic.twitter.com/6LSvTRmvyj
— Ramalinga Reddy (@RLR_BTM) May 24, 2024
ನಮಗೇನು ಅಭ್ಯಂತರವಿಲ್ಲ!
'ಬಿ ಜೆ ಪಿಯವರು ಸಾರಿಗೆ ಸಂಸ್ಥೆಗಳಿಗೆ ದಯಪಾಲಿಸಿದ ದುರಂತ ಕಥೆಗಳನ್ನು ಮತ್ತೊಮ್ಮೆ ಮಗದೊಮ್ಮೆ ನೆನಪಿಸಲು ನಮಗೆ ಅವರೇ ಅವಕಾಶ ಮಾಡಿಕೊಡುವುದರ ಹಿಂದಿನ ಉದ್ದೇಶ, ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗ ಪ್ರಚಾರ ನೀಡುವುದು ಎಂದಾದರೆ ನಮಗೇನು ಅಭ್ಯಂತರವಿಲ್ಲ.'
ಘಟನೆಯ ಅಸಲಿ ಕಥೆ ಏನು?
'ಮುಂದುವರೆದು, ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅದರನ್ವಯ, ದಿನಾಂಕ: 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಶ್ರೀ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203 D ಹಾಗೂ ನಿರ್ವಾಹಕರಾಗಿ ಶ್ರೀಮತಿ ಅನಿತಾ ಎಚ್. ಬಿ ಸಂ-396 ರವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 16:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ.
ತಪ್ಪು ಮಾಡಿದವರು ಸೇವೆಯಿಂದ ಅಮಾನತು
'ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ (Roof Leakage) ಇರಲಿಲ್ಲ . ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿ ಮೇಲ್ಚಾವಣಿಯು ಸೋರದೆ ಇರುವುದನ್ನು ಖಚಿತಪಡಿಸಿಕೊಂಡಿರುತ್ತಾರೆ. ಈ ರೀತಿಯ ಬೇಜಾವಬ್ದಾರಿತನದಿಂದ ವರ್ತಿಸಿ, ಸಂಸ್ಥೆಯ ಘನತೆಗೆ ಧಕ್ಮೆ ತಂದ ಚಾಲನಾ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.' ಎಂದಿದ್ದಾರೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು.
-
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ












Click it and Unblock the Notifications