‘ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ?’ ಬಿಜೆಪಿ ನಾಯಕರಿಗೆ ರಾಮಲಿಂಗಾರೆಡ್ಡಿ ಪ್ರಶ್ನೆ!
ಬಿಹಾರದಲ್ಲಿ ಈಗ ವಿಧಾನಸಭೆ ಚುನಾವಣೆ ನಡೆಯುತ್ತಿದೆ, ಆದರೆ ಬಿಹಾರ ಚುನಾವಣೆಯ ಕಾವು ಈಗ ಕರ್ನಾಟಕದ ನೆಲವನ್ನೂ ತಲುಪಿದ್ದು ರಾಜಕೀಯ ತಿಕ್ಕಾಟ ಜೋರಾಗಿದೆ. ಒಂದು ಕಡೆ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ಹಾಗೇ ಬಿಹಾರ ಚುನಾವಣೆಗೆ ಇಲ್ಲಿಂದ ಹಣ ಹೋಗ್ತಿದೆ ಎಂಬ ಆರೋಪ ಕೂಡ ಮಾಡುತ್ತಿದ್ದಾರೆ ಬಿಜೆಪಿ ನಾಯಕರು. ಇಂತಹ ಸಮಯದಲ್ಲೇ ಬಿಜೆಪಿ ನಾಯಕರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈಗ ಗಂಭೀರವಾದ ಪ್ರಶ್ನೆಗಳನ್ನು ಕೇಳಿದ್ದಾರೆ.
'ಕರ್ನಾಟಕ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ! ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ. ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ?' ಎಂದು ಪ್ರಶ್ನೆ ಮಾಡಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ಚುನಾವಣೆಗೆ ಅಕ್ರಮ ಭ್ರಷ್ಟಾಚಾರದ ಹಣವನ್ನು ಬಳಸುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ದೇಶಕ್ಕೆ ನೀಡಿದ ಕೊಡುಗೆ ಮತ್ತು ಜನಪರ ಕೆಲಸಗಳಿಂದ ಕಾಂಗ್ರೆಸ್ ಪಕ್ಷ ಇಂದಿಗೂ ಸದೃಢವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ ಸಚಿವ ರಾಮಲಿಂಗಾರೆಡ್ಡಿ ಅವರು.

ಬಿಜೆಪಿ ನಾಯಕರಿಗೆ ಸಚಿವರ ಪ್ರಶ್ನೆ
ಹಾಗೇ ತಮ್ಮ ಟ್ವೀಟ್‌ನಲ್ಲಿ 'ನಿಮ್ಮದೇ ಆಡಳಿತದ ಕರಾಳ ಇತಿಹಾಸವನ್ನು ಒಮ್ಮೆ ನೆನಪಿಸುತ್ತೇನೆ: 2008-2013 ಮತ್ತು 2019-2023: ಈ ಅವಧಿಗಳಲ್ಲಿ ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರವಿತ್ತು. ಆಗ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಚುನಾವಣೆಗಳು ನಡೆದವು. ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ನೀವೆಲ್ಲರೂ ಹಂಚಿ ಕಳುಹಿಸಿದ್ದೀರಾ? ರಾಜ್ಯದ ಜನತೆಯ ಮುಂದೆ ಉತ್ತರಿಸುವ ಧೈರ್ಯ ನಿಮಗಿದೆಯೇ?' ಎಂದಿದ್ದಾರೆ.
ಕರ್ನಾಟಕ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ! ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ.
— Ramalinga Reddy (@RLR_BTM) October 21, 2025
ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ?
ಚುನಾವಣೆಗೆ ಅಕ್ರಮ ಭ್ರಷ್ಟಾಚಾರದ ಹಣವನ್ನು ಬಳಸುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ.… pic.twitter.com/zt05YT4DZv
ಆಪರೇಷನ್ ಕಮಲದ ಬಗ್ಗೆ ಪ್ರಸ್ತಾಪ
ಇಷ್ಟೇ ಅಲ್ಲದೆ ಕರ್ನಾಟಕದ ಬಿಜೆಪಿ ನಾಯಕರಿಗೆ ಇನ್ನೂ ಹಲವು ಪ್ರಶ್ನೆಗಳನ್ನ ಕೇಳಿರುವ ಸಚಿವ ರಾಮಲಿಂಗಾರೆಡ್ಡಿ ಅವರು, 'ಆಪರೇಷನ್ ಕಮಲ: ಹಣದ ಹೊಳೆ ಹರಿಸಿ, ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ 'ಆಪರೇಷನ್ ಕಮಲ'ದ ಪಿತಾಮಹರು ನೀವು ಎನ್ನುವುದು ರಾಜ್ಯದ ಮೂಲೆ ಮೂಲೆಯಲ್ಲಿರುವ ಸಾಮಾನ್ಯ ಪ್ರಜೆಗೂ ತಿಳಿದಿದೆ.' ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಬಿಹಾರ ಚುನಾವಣೆ ವಿಚಾರ ಈಗ ಕರ್ನಾಟಕದ ನೆಲದಲ್ಲಿ ರಾಜಕೀಯ ಕಿಚ್ಚು ಹೊತ್ತಿಸಿದೆ. ಅದರಲ್ಲೂ ಬಿಜೆಪಿ ನಾಯಕರು ಮಾಡಿದ್ದ ಆರೋಪಕ್ಕೆ ಇದೀಗ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದು, ವಾಗ್ಯುದ್ಧ ಜೋರಾಗುತ್ತಿದೆ.












Click it and Unblock the Notifications