KEA Exams 2026: ಸಿಇಟಿ 2026 ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ, ಇತರ ಪರೀಕ್ಷೆಗಳ ಅಪ್ಡೇಟ್ಸ್
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರಸ್ತಕ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗಳು(UGCET-2026) ಮುಂದಿನ ಏಪ್ರಿಲ್ 23 ಮತ್ತು 24ರಂದು ನಡೆಯಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದೆ. ಅದರೊಂದಿಗೆ ಇತರ ಪರೀಕ್ಷೆಗಳ ದಿನಾಂಕ, ಮಾಹಿತಿಗಳನ್ನು ನೀಡಿದೆ. ಸಿಇಟಿ ವಿಷಯ, ಸಮಯದ ವಿವರ ಇಲ್ಲಿದೆ.
ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಗಳನ್ನು ಬೆಂಗಳೂರು, ಬೆಳಗಾವಿ, ವಿಜಯಪುರ ಹಾಗೂ ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನಡೆಸಲು ಕೆಇಎ ನಿರ್ಧರಿಸಿದೆ. ಈ ಪರೀಕ್ಷೆ 22-04-2026ರಂದು ಬುಧವಾರ ಬೆಳಗ್ಗೆ 10.30ರಿಂದ 11.30ರವರೆಗೆ (ನಾಲ್ಕನೇ ತರಗತಿ ಮಟ್ಟದ-50) ನಡೆಯಲಿದೆ.

ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು 2026 ಏಪ್ರಿಲ್ 23ರಂದು ಗುರುವಾರ ಎರಡು ಪರೀಕ್ಷೆಗಳು ನಡೆಯಲಿವೆ. ಅದರಲ್ಲಿ ಬೆಳಗ್ಗೆ 10.30 ಗಂಟೆಯಿಂದ 11.50ರವರೆಗೆ ಭೌತಶಾಸ್ತ್ರ (60 ಅಂಕಗಳು), ಅದೇ ದಿನ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ಜುರುಗಲಿವೆ.
2026 ಏಪ್ರಿಲ್ 24ರಂದು ಶುಕ್ರವಾರ ಬೆಳಗ್ಗೆ 10.30ರಿಂದ 11.50ಗಂಟೆವರೆಗೆ ಗಣಿತಶಾಸ್ತ್ರ (60 ಅಂಕಗಳು) ಹಾಗೂ ಅದೇ ದಿನ ಮಧ್ಯಾಹ್ನ 2.30ರಿಂದ 3.50ರವರೆಗೆ ಜೀವಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಇಷ್ಟು ಮಾತ್ರವಲ್ಲದೇ 2026ನೇ ಸಾಲಿನಲ್ಲಿ ಯಾವೆಲ್ಲ ವೃತ್ತಿಪರ ಕೋರ್ಸ್‌ಗಳಿಗೆ ಸಂಬಂಧಿಸಿದ ಪರೀಕ್ಷೆ, ಪ್ರವೇಶ ನಡೆಯುತ್ತವೆ ಎಂಬುದನ್ನು ತಿಳಿಸಿದೆ.
2026ರಲ್ಲಿ ನಡೆಯಲಿರುವ ಕೆಲ ಪರೀಕ್ಷೆಗಳ ವೇಳಾಪಟ್ಟಿ
1. ಮಾರ್ಚ್ 01ರಂದು 6ನೇ ತರಗತಿಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (KREIS)ಗೆ ಪ್ರವೇಶ ನಡೆಯಲಿದೆ.
2. ಮೇ 14ರಂದು ಎಂಬಿಎ, ಎಂಸಿಎ ಕೋರ್ಸ್‌ಗಳ ಅಭ್ಯರ್ಥಿಗಳಿಗೆ ಪಿಜಿಸಿಇಟಿ 2026 (PGCET 2026) ಪರೀಕ್ಷೆ
3. ಮೇ 23ರಂದು ಎಂಇ, ಎಂಟೆಕ್ ಸೇರಿ ವಿವಿಧ ಕೋರ್ಸ್‌ಗಳಿಗಾಗಿ ಪಿಜಿಸಿಇಟಿ 2026 (PGCET 2026) ಪರೀಕ್ಷೆ
4. ಮೇ 23ರಂದು ಬಿ.ಇ./ಬಿ.ಟಿಕ್ ಪದವಿ ಕೋರ್ಸ್‌ಗಳ ಅಭ್ಯರ್ಥಿಗಳಿಗೆ 2ನೇ ವರ್ಷಕ್ಕೆ ಲ್ಯಾಟರಲ್ ಪ್ರವೇಶ ಪರೀಕ್ಷೆ
5. ಜುಲೈ 18ರಂದು ಎಂಎಸ್‌ಸಿ ನರ್ಸಿಂಗ್, ಎಂಪಿಟಿ, ಎಂಎಸ್‌ಸಿ ಎಎಚ್‌ಎಸ್ ಕೋರ್ಸ್‌ಗಳ ಪರೀಕ್ಷೆ
6. ಅಕ್ಟೊಬರ್ 11ಕ್ಕೆ ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2026 (KSET 2026) ನಡೆಯಲಿದೆ.
7. ನವೆಂಬರ್ 21ರಂದು ಎಂ-ಫಾರ್ಮಾ, ಡಿ-ಫಾರ್ಮಾಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಕೆಇಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜನವರಿ 17ರಿಂದ ಅರ್ಜಿ ಸಲ್ಲಿಕೆ
ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಯುಜಿಸೆಟ್ (UGCET-2026) ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದ 2026ನೇ ಸಾಲಿನ ಸಿಇಟಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದರು. ವಿವಿಧ ಮೇಲಿನ ಪರೀಕ್ಷೆಗಳ ವೇಳಾಪಟ್ಟಿಯನ್ನೂ ಪ್ರಕಟಿಸಿದರು. ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆಗಳ ವೇಳಾಪಟ್ಟಿ ಬಗೆಗಿನ ಮಾಹಿತಿ ಹಂಚಿಕೊಂಡರು.
ಪ್ರಸಕ್ತ ಸಾಲಿನ 2026 ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (UGCET 2026) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಸಚಿವರು ಘೋಷಿಸಿದರು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏಪ್ರಿಲ್ 22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದಲೇ ಆರಂಭವಾಗಲಿದೆ ಎಂದರು.
ಈ ಸಂದರ್ಭದಲ್ಲಿ 2026ನೇ ಸಾಲಿನ ಸಿಇಟಿ ಕುರಿತು ಮಾಹಿತಿ ನೀಡುವ ಸಿಇಟಿ ದಿಕ್ಸೂಚಿ ಕಿರು ಹೊತ್ತಿಗೆಯನ್ನು ಸಚಿವರು ಬಿಡುಗಡೆ ಮಾಡಿದರು. ಶುಲ್ಕ ನಿಯಂತ್ರಣ ಸಮಿತಿ ಹಾಗೂ ಪ್ರವೇಶ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರ ನೂತನ ಕೊಠಡಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications