KEA UGNEET: ಯುಜಿನೀಟ್ ತಾತ್ಕಾಲಿಕ ಸೀಟು ಹಂಚಿಕೆಗೆ ಹೈಕೋರ್ಟ್ ತಡೆ..
KEA UGNEET 2025: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) UGNEET2025 ಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದ್ದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ತಾತ್ಕಾಲಿಕ ಸೀಟು ಹಂಚಿಕೆಗೆ ಹೈಕೋರ್ಟ್ ತಡೆ ನೀಡಿದೆ. ಮುಂದಿನ ಪ್ರಕ್ರಿಯೆಯ ಕುರಿತು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.
UGNEET 25 ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕಳೆದ ಅಕ್ಟೋಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 3ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಲಿತಾಂಶ ಪ್ರಕಟಿಸಿತ್ತು. ಇದರ ವಿರುದ್ಧ ಭಾರತದ ಸಂವಿಧಾನದ ಆರ್ಟಿಕಲ್ 226 ರ ಅಡಿ ಅರ್ಜಿಯನ್ನು ಸಲ್ಲಿಸಲಾಗಿದೆ. ಅದರಲ್ಲಿ ಯುಜಿನೀಟ್2025 ವೈದ್ಯಕೀಯ 3ನೇ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿ (24/10/2025) (ಪೂರ್ಣ ಕ್ರೋಢೀಕರಣ) ರದ್ದುಪಡಿಸಲು ಕೋರಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ಹೈಕೋರ್ಟ್ ತ್ರಿಸದಸ್ಯ ಪೀಠ ಶುಕ್ರವಾರ ಪಲಿತಾಂಶ ರದ್ದುಪಡಿಸಿ ಆದೇಶಿಸಿದೆ.

ಅರ್ಜಿದಾರರು ಸೇರಿದಂತೆ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಎಲ್ಲಾ ಖಾಲಿ ಆಸನಗಳಿಗೆ ಯುಜಿ-ನೀಟ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ 2025 ರ 3 ನೇ ಸುತ್ತಿನ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಅರ್ಜಿದಾರರಿಗೆ ಅನುಮತಿ ನೀಡುವಂತೆ ಸೂಚಿಸಿ ಕೋರ್ಟ್ ಆದೇಶಿಸಿದೆ.
ಹೈಕೋರ್ಟ್ ಆದೇಶದ ಪ್ರಕಾರ ಪರಿಷ್ಕೃತ ತಾತ್ಕಾಲಿಕ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕ್ರಿಯೆ ಆರಂಭಿಸಿದೆ. ಸದ್ಯದಲ್ಲೇ ಫಲಿತಾಂಶ ಪ್ರಕಟಿಸಲಿದೆ ಎಂದರು.
ಕಾಲೇಜು ಪ್ರವೇಶಕ್ಕೆ ಡಿಸೆಂಬರ್ 7 ಕೊನೆ ದಿನ..!
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಸ್ನಾತಕೋತ್ತರ) PGNEET 2025 ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದೆ. ಪ್ರವೇಶ ಪ್ರಕ್ರಿಯೆಗೆ ದಿನಾಂಕಗಳನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಆಯ್ಕೆ ದಾಖಲಿಸಲು ಡಿಸೆಂಬರ್ 4ರಂದು ಸಂಜೆ 4ರವರೆಗೆ ಅವಕಾಶ ನೀಡಲಾಗಿತ್ತು. ಆಯ್ಕೆ 1 ಮತ್ತು 2 ದಾಖಲಿಸಿದವರು ಡಿ.5ರೊಳಗೆ ಶುಲ್ಕ ಪಾವತಿಸಬೇಕು. ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿಸೆಂಬರ್ 6ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು. ಮೂಲ ದಾಖಲೆ ಸಲ್ಲಿಸಿದ ನಂತರ ಡಿಸೆಂಬರ್ 7ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications