ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್ ಸಡಿಲಿಕೆ: ತಾಂತ್ರಿಕ ಸಲಹಾ ಸಮಿತಿ ಸಭೆಯ ಮುಖ್ಯಾಂಶಗಳು

|
Google Oneindia Kannada News

ಬೆಂಗಳೂರು, ಜೂನ್ 10: ರಾಜ್ಯದಲ್ಲಿ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಕೊರೊನಾ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ.

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ.

1. ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ.

Lockdown

2. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.

• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬAದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.

• ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿAದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿAದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

Recommended Video

ಯಾವ್ಯಾವ ಜಿಲ್ಲೆಗಳು Unlock: ಹೊಸ ಮಾರ್ಗಸೂಚಿಯಲ್ಲೇನಿದೆ? | CM Yediyurappa | Oneindia Kannada

3. ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

English summary
Karnataka Unlock 1.0 Guidelines: What's Allowed To Open And What's Remain Closed information here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X