• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Karnataka Unlock 2.0: ಜೂನ್ 21ರಿಂದ 2ನೇ ಹಂತದ ಲಾಕ್‌ಡೌನ್ ಸಡಿಲಿಕೆ: ಏನಿರುತ್ತೆ?, ಏನಿರಲ್ಲ?

|
Google Oneindia Kannada News

ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಶುರುವಾಗಲಿದೆ. ಈಗಾಗಲೇ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಲಾಗಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

   ಜೂನ್ 21ರಿಂದ unlock ಪ್ರಕ್ರಿಯೆ ಶುರು ! | Oneindia Kannada

   ಇದೀಗ ಜೂನ್ 21ರಂದು ಎರಡನೇ ಹಂತದ ಲಾಕ್‌ಡೌನ್ ಸಡಿಲ ಪ್ರಕ್ರಿಯೆ ಶುರುವಾಗಲಿದ್ದು, ಯಾವುದಕ್ಕೆಲ್ಲಾ ಅನುಮತಿ ಇದೆ, ಯಾವುದಕ್ಕೆ ಇರುವುದಿಲ್ಲ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

   ಲಾಕ್‌ಡೌನ್ ಸಡಿಲಿಕೆ: ತರ್ಕಕ್ಕೇ ನಿಲುಕದ ಸರಕಾರದ ಮಾರ್ಗಸೂಚಿಗಳುಲಾಕ್‌ಡೌನ್ ಸಡಿಲಿಕೆ: ತರ್ಕಕ್ಕೇ ನಿಲುಕದ ಸರಕಾರದ ಮಾರ್ಗಸೂಚಿಗಳು

   ಅನ್‌ಲಾಕ್ ಮಾಡುವುದರ ಜತೆಗೆ ಕೊರೊನಾ ಸೋಂಕಿನಿಂದ ಜನರಿಗೆ ರಕ್ಷಣೆ ನೀಡುವುದು ಕೂಡ ಸರ್ಕಾರದ ಆದ್ಯತೆಯಾಗಿದ್ದು, ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗುತ್ತಿದೆ.

   ಜೂನ್ 21 ರಿಂದ ಅನ್​ಲಾಕ್ 2.0 ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಇದೀಗ ಒಪ್ಪಿಗೆ ನೀಡಿದೆ. ಜೂನ್ 21 ರಿಂದ ಮಾಲ್, ಹೇರ್​ ಕಟ್​ ಶಾಪ್, ಹೋಟೆಲ್, ಚಿಕ್ಕ‌ಚಿಕ್ಕ ಮಾರುಕಟ್ಟೆ, ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು.

   ಕರ್ನಾಟಕದಲ್ಲಿ ಎರಡನೇ ಹಂತದ ಅನ್​ಲಾಕ್​ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್​ಲಾಕ್ 2.0 ಜಾರಿಗೆ ಬರುತ್ತದೆ.

   ರಾಜ್ಯದಲ್ಲಿ ಅನ್‌ಲಾಕ್ 2.0 ಜಾರಿಯಾಗುವ ಹಿನ್ನೆಲೆಯಲ್ಲಿ ಜೂ.21ರಿಂದ ಕರ್ನಾಟಕದಲ್ಲಿ ಬಸ್ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರವಾಗುವ ಸಾಧ್ಯತೆ ಇದೆ.

   ಚಿನ್ನದಂಗಡಿ, ಬಟ್ಟೆ ಅಂಗಡಿ, ಸೇರಿದಂತೆ ಎಲ್ಲಾ ಬಗೆಯ ವಾಣಿಜ್ಯ ಮಳಿಗೆಗಳುಕೂಡ ಜೂನ್ 21 ರಿಂದ ಓಪನ್ ಆಗಲಿವೆ. ದಿನಕ್ಕೆ ಎಂಟು ಗಂಟೆಗಳ ಕಾಲ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಲಾಗುವುದು. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಶೇ.50 ರಷ್ಟು ಗ್ರಾಹಕರಿಗೆ ಪ್ರವೇಶ ಅವಕಾಶ ನೀಡಲಾಗಿದೆ.

   ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ಸಹ ಓಪನ್ ಮಾಡಲು ತಾಂತ್ರಿಕ ಸಲಹಾ ಸಮಿತಿಯಿಂದ‌ ಗ್ರಿನ್ ಸಿಗ್ನಲ್ ದೊರೆತಿದೆ. ಹಾಗೆಯೇ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಅಭಿಪ್ರಾಯದಂತೆ ಥಿಯೇಟರ್, ಜಿಮ್, ಸ್ವಿಮ್ಮಿಂಗ್ ಪೂಲ್, ಪಬ್, ಬಾರ್, ಕ್ರೀಡಾಂಗಣಗಳು ಬಂದ್ ಆಗಿರಲಿವೆ, ಇವುಗಳೆಲ್ಲವೂ ಮೂರನೇ ಹಂತದ ಅನ್‌ಲಾಕ್ ಸಂದರ್ಭದಲ್ಲಿ ತೆರೆಯುವ ನಿರೀಕ್ಷೆ ಇದೆ.

   English summary
   Karnataka Unlock 2.0 to Begin From June 21 Technical Committee Gives Green Signal to Karnataka Government. Here's what's open and what's remain closed. Take a look.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X