ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್ ಸಡಿಲಿಕೆ: ಅಂತಾರಾಜ್ಯ, ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ

|
Google Oneindia Kannada News

ಬೆಂಗಳೂರು, ಜೂನ್ 10: ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಹೊರತುಪಡಿಸಿ ಬೇರೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದೆ. ಲಾಕ್‌ಡೌನ್ ಸಡಿಲಗೊಳಿಸಿರುವ ಜಿಲ್ಲೆಗಳಿಗೆ ಅಂರ್ ಜಿಲ್ಲೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಹಾಗೆಯೇ ಬೇರೆ ರಾಜ್ಯಗಳಿಗೆ ತೆರಳಲು ಕೂಡ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಕೋವಿಡ್‌ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್‌ ನಲ್ಲಿ ಮಾರ್ಪಾಡು ಮಾಡಿ ಘೋಷಣೆ ಮಾಡಿದೆ.

ಆಟೊ, ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಆಟೊ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಇರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮದ್ಯದ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಬಾರ್ ರೆಸ್ಟೋರೆಂಟ್​, ವೈನ್​ ಸ್ಟೋರ್​ಗಳಲ್ಲಿ ಅವಕಾಶ ಸಿಗಲಿದೆ. ಎಂಎಸ್​ಐಎಲ್​ಗಳಲ್ಲಿ ​ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಸಿಗಲಿದೆ ಎಂದು ಅವರು ತಿಳಿಸಿದರು.

Lockdown unlock

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ 11 ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್​ಡೌನ್​ ಅನ್ನು ಜೂ. 21ರವರೆಗೆ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಿಳಿಸಿದರು.

ರಾಜ್ಯದ 11 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‌ಡೌನ್ ಮುಂದುವರಿಕೆರಾಜ್ಯದ 11 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‌ಡೌನ್ ಮುಂದುವರಿಕೆ

ಲಾಕ್​ಡೌನ್​ ಸಡಿಲಿಕೆ ಕುರಿತು ಇಂದು ಅಧಿಕಾರಿಗಳು, ಸಚಿವರು, ತಜ್ಞರೊಂದಿಗೆ ಅವರು ಸಭೆ ನಡೆಸಿದರು. ಇದಾದ ಬಳಿಕ ಮಾತನಾಡಿದ ಅವರು. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆ ಹೊರತು ಪಡಿಸಿ ನಿರ್ಬಂಧ ಸಡಿಲಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

Breaking: ಜೂನ್ 14 ನಂತರ 11 ಜಿಲ್ಲೆಗಳಿಗೆ ಲಾಕ್‌ಡೌನ್ ಸಡಿಲಿಕೆ ಇಲ್ಲ: ಯಡಿಯೂರಪ್ಪBreaking: ಜೂನ್ 14 ನಂತರ 11 ಜಿಲ್ಲೆಗಳಿಗೆ ಲಾಕ್‌ಡೌನ್ ಸಡಿಲಿಕೆ ಇಲ್ಲ: ಯಡಿಯೂರಪ್ಪ

ಸೋಂಕಿನ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರೆಯಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಸಲಾಗಿದೆ. ರಾಜ್ಯಾದ್ಯಾಂತ ವಾರಾಂತ್ಯದ ಕರ್ಫ್ಯೂ, ಇದರ ಜೊತೆ ಪ್ರತಿನಿತ್ಯ ರಾತ್ರಿ ಕರ್ಫ್ಯೂ ಕೂಡ ಜಾರಿಯಲ್ಲಿರಲಿದೆ. ಹಾಗೂ ಅಂತರ ಜಿಲ್ಲೆ ಸಂಚಾರಕ್ಕೆ ಅವಕಾಶವಿದ್ದು, ಅಂತರ್​ ರಾಜ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ ಎಂದರು.

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧ ಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ,ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈಗಿರುವಂತೆ ಲಾಕ್​ಡೌನ್​ ಮಾರ್ಗಸೂಚಿಯನ್ನು ಜೂ 21ರವರೆಗೆ ಮುಂದುವರೆಸಬೇಕು.

Recommended Video

ಯಾವ್ಯಾವ ಜಿಲ್ಲೆಗಳು Unlock: ಹೊಸ ಮಾರ್ಗಸೂಚಿಯಲ್ಲೇನಿದೆ? | CM Yediyurappa | Oneindia Kannada

ಇದರಲ್ಲಿ ಯಾವುದೇ ಬದಾವಣೆ ಇಲ್ಲ. ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದರು.

English summary
Karnataka unlock: Inter-Istrict And Inter-State Travel Allowed
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X