ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಥಳೀಯ ಸಂಸ್ಥೆಗಳ ಚುನಾವಣೆ 2019 : ಸಂಪೂರ್ಣ ಫಲಿತಾಂಶ

|
Google Oneindia Kannada News

ಬೆಂಗಳೂರು, ಮೇ 31 : ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್, ಏಕಾಂಗಿಯಾಗಿ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಿತ್ತು.

ಕರ್ನಾಟಕದ 63 ಸ್ಥಳೀಯ ಸಂಸ್ಥೆಗಳ ಪೈಕಿ 57 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಒಟ್ಟು 1,221 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 509 ವಾರ್ಡ್‌ಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿದೆ.

ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?

ಒಟ್ಟು 8 ನಗರ ಪಾಲಿಕೆಗಳಿಗೆ ಚುನಾವಣೆ ನಡೆದಿತ್ತು. ಇವುಗಳಲ್ಲಿ 7ರಲ್ಲಿ ಅತಂತ್ರ ಫಲಿತಾಂಶ ಬಂದಿದೆ. ಸಾಗರ ನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಜೂನ್ 3ರಂದು ನಡೆಯಲಿದೆ. ಉಳಿದ ಏಳು ಕಡೆ ಫಲಿತಾಂಶ ಅತಂತ್ರವಾಗಿದೆ.

ಲೋಕಲ್ ವಾರ್: ಉ.ಕದಲ್ಲಿ ಜೆಡಿಎಸ್ ಝಗಮಗ, ಕಾಂಗ್ರೆಸ್‌ ಕಿಲಕಿಲಲೋಕಲ್ ವಾರ್: ಉ.ಕದಲ್ಲಿ ಜೆಡಿಎಸ್ ಝಗಮಗ, ಕಾಂಗ್ರೆಸ್‌ ಕಿಲಕಿಲ

33 ಪುರಸಭೆಗಳ ಪೈಕಿ 13ರಲ್ಲಿ ಕಾಂಗ್ರೆಸ್, 22 ಪಟ್ಟಣ ಪಂಚಾಯಿತಿಗಳಲ್ಲಿ 3 ಕಡೆ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 7 ಪಟ್ಟಣ ಪಂಚಾಯಿತಿಗಳಲ್ಲೂ ಅತಂತ್ರ ಫಲಿತಾಂಶ ಬಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 2 ವಾರ್ಡ್‌ಗಳಿಗೆ ಉಪ ಚುನಾವಣೆ ನಡೆದಿತ್ತು. ಬಿಜೆಪಿ 1, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 1 ಸ್ಥಾನದಲ್ಲಿ ಜಯಗಳಿಸಿದೆ.

ಬಿಬಿಎಂಪಿ ಉಪ ಚುನಾವಣೆ 2019 : ಮೈತ್ರಿಕೂಟ, ಬಿಜೆಪಿಗೆ ತಲಾ 1 ಸ್ಥಾನಬಿಬಿಎಂಪಿ ಉಪ ಚುನಾವಣೆ 2019 : ಮೈತ್ರಿಕೂಟ, ಬಿಜೆಪಿಗೆ ತಲಾ 1 ಸ್ಥಾನ

ಕಾಂಗ್ರೆಸ್‌ ದೊಡ್ಡ ಪಕ್ಷ

ಕಾಂಗ್ರೆಸ್‌ ದೊಡ್ಡ ಪಕ್ಷ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. 63 ಸ್ಥಳೀಯ ಸಂಸ್ಥೆಗಳ ಪೈಕಿ 57 ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. 1,221 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 509, ಬಿಜೆಪಿ 366 ಮತ್ತು ಜೆಡಿಎಸ್ 174 ವಾರ್ಡ್‌ಗಳಲ್ಲಿ ಜಯಗಳಿಸಿವೆ. 160 ವಾರ್ಡ್‌ ಪಕ್ಷೇತರ ಅಭ್ಯರ್ಥಿಗಳ ಪಾಲಾಗಿದೆ.

ಬಿಜೆಪಿ ಸಾಧನೆ

ಬಿಜೆಪಿ ಸಾಧನೆ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 5 ಪುರಸಭೆ, 9 ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪೂರ್ಣ ಬಹುಮತವನ್ನು ಗಳಿಸಿವೆ. ಕಾಂಗ್ರೆಸ್‌ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ನಂತರದ ಸ್ಥಾನದಲ್ಲಿದೆ.

ಕಾಂಗ್ರೆಸ್ ಸಾಧನೆ ಏನು?

ಕಾಂಗ್ರೆಸ್ ಸಾಧನೆ ಏನು?

2 ನಗರಸಭೆ, 13 ಪುರಸಭೆ, 3 ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಆದರೆ, ಏಕಾಂಗಿಯಾಗಿ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಿತ್ತು.

ಜೆಡಿಎಸ್‌ ಪಾಲಿಗೆ ಸಿಕ್ಕಿದ್ದೆಷ್ಟು?

ಜೆಡಿಎಸ್‌ ಪಾಲಿಗೆ ಸಿಕ್ಕಿದ್ದೆಷ್ಟು?

ಒಟ್ಟು 174 ವಾರ್ಡ್‌ಗಳನ್ನು ಜೆಡಿಎಸ್ ಬುಟ್ಟಿಗೆ ಹಾಕಿಕೊಂಡಿದೆ. 2 ಪುರಸಭೆಗಳಲ್ಲಿ ಜೆಡಿಎಸ್ ಸ್ಪಷ್ಟ ಬಹುಮತವನ್ನು ಪಡೆದಿದೆ.

English summary
Karnataka's 2nd phase of urban local bodies election result announced on May 31, 2019. In 1221 ward Congress bagged 509, BJP 366 and JD(S) 174.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X