Live

Karnataka ULB Election Results 2021 LIVE: ಕಾಂಗ್ರೆಸ್ ಪಕ್ಷ ಮೇಲುಗೈ

ಬೆಂಗಳೂರು, ಡಿಸೆಂಬರ್ 30: ರಾಜ್ಯದಲ್ಲಿ ಸೋಮವಾರ ( ಡಿ.27) ರಂದು ನಡೆದಿದ್ದ 19 ಜಿಲ್ಲೆಗಳ 58 ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.30) ಪ್ರಕಟವಾಗಲಿದೆ. ಹಾಗೆಯೇ ವಿವಿಧ ನಗರ ಸಂಸ್ಥೆಗಳ 9 ವಾರ್ಡ್​ಗಳ ಉಪ ಚುನಾವಣೆ ಹಾಗೂ 57 ಗ್ರಾಮ ಪಂಚಾಯಿತಿಗಳ ಚುನಾವಣೆಯ ಫಲಿತಾಂಶ ಕೂಡ ಇಂದು ಹೊರಬೀಳಲಿದ್ದು, ಮತ ಎಣಿಕೆ ಆರಂಭವಾಗಲಿದೆ.

ಚಿಕ್ಕಮಗಳೂರು, ತುಮಕೂರು ಜಿಲ್ಲೆಯ ಶಿರಾ, ಗದಗ-ಬೆಟಗೇರಿ ಹಾಗೂ ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆಗಳಿಗೆ ಚುನಾವಣೆ ನಡೆದಿತ್ತು. ಬೆಳಗಾವಿ ಜಿಲ್ಲೆಯ ಅಥಣಿ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಸೇರಿ 209 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು.

ಇದಲ್ಲದೆ ವಿವಿಧ ಕಾರಣಗಳಿಂದ ತೆರವಾಗಿರುವ ಚಾಮರಾಜನಗರ ಸಭೆಯ 6, ಹರಿಹರ ನಗರಸಭೆಯ 21, ದಾಂಡೇಲಿ ನಗರಸಭೆಯ 18, ಗೌರಿಬಿದನೂರು ನಗರಸಭೆಯ 10, ಮೂಡಲಗಿ ಪುರಸಭೆಯ 9, ಚಡಚಣ ಪಟ್ಟಣ ಪಂಚಾಯಿತಿಯ 4, ಸೇಡಂ ಪುರಸಭೆಯ 13, ಹಾನಗಲ್ ಪುರಸಭೆಯ 19 ಹಾಗೂ ಜಮಖಂಡಿ ನಗರಸಭೆಯ 9 ಸ್ಥಾನಗಳ ಫಲಿತಾಂಶ ಪ್ರಕಟವಾಗಲಿದೆ.

Karnataka Urban Local Body Election Results 2021 Live Updates, News and Highlights

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಸೇರಿ 1185 ವಾರ್ಡ್‌ಗಳಿಗೆ ಮತ ಎಣಿಕೆ ಆರಂಭವಾಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಿಪಿಐ (ಎಂ), ಎಸ್‌ಡಿಪಿಐ, ಅಮ್ ಆದ್ಮಿ ಪಕ್ಷ, ಕೆ.ಆರ್.ಎಸ್. ಸಹಿತ ಹಲವು ಪಕ್ಷಗಳು ಹಾಗೂ ಪಕ್ಷೇತರರು ಸೇರಿ 4,961 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗುತ್ತದೆ.

Dec 30, 2021, 2:52 pm IST

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯತ್‌ನಲ್ಲಿ ಒಟ್ಟು 14 ಸ್ಥಾನಗಳಿದ್ದು, ಅದರಲ್ಲಿ ಎರಡನೇ ವಾರ್ಡ್‌ಗೆ ಉಪ ಚುನಾವಣೆ ನಡೆದಿತ್ತು. ಎರಡನೇ ವಾರ್ಡ್ ಸ್ಥಾನಕ್ಕೆ ಅತ್ತೆ ಪಾರ್ವತಮ್ಮ ಮತ್ತು ಸೊಸೆ ಲಕ್ಷಮ್ಮ ಸ್ಪರ್ಧೆ ಮಾಡಿದ್ದರು. ಸೊಸೆ ವಿರುದ್ಧ ಅತ್ತೆ ಗೆದ್ದು ಬೀಗಿದ್ದಾರೆ.
Dec 30, 2021, 2:52 pm IST

ಬಾಗಲಕೋಟೆಯಲ್ಲಿ ಪತಿ-ಪತ್ನಿ ಇಬ್ಬರೂ ಗೆದ್ದು ಕಮಾಲ್ ಮಾಡಿದ್ದಾರೆ. ಕಮತಗಿ ಪಟ್ಟಣ ಪಂಚಾಯಿತಿ ಮತ ಎಣಿಕೆಯಲ್ಲಿ ಪತಿ, ಪತ್ನಿ ಇಬ್ಬರೂ ಗೆಲುವು ಸಾಧಿಸಿದ್ದಾರೆ. ವಾರ್ಡ್ ನಂಬರ್ ಏಳರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪತಿ ದೇವಿ ಪ್ರಸಾದ್ ನಿಂಬಲಗುಂದಿ ಜಯ ಕಂಡಿದ್ದಾರೆ. ಇನ್ನು ವಾರ್ಡ್ ನಂಬರ್ 15ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪತ್ನಿ ನೇತ್ರಾವತಿ ನಿಂಬಲಗುಂದಿ ಕೂಡ ಜಯ ಗಳಿಸಿದ್ದಾರೆ.
Dec 30, 2021, 2:51 pm IST

ಯಾದಗಿರಿಯಲ್ಲಿ ಪೆಟ್ರೋಲ್ ಬಂಕ್‌ನಲ್ಲಿ‌ ಕೆಲಸ ಮಾಡುವ ಯುವಕ ಗೆಲವು ಸಾಧಿಸಿ, ಪುರಸಭೆಗೆ ಪ್ರವೇಶ ಮಾಡಿದ್ದಾನೆ. ಕಕ್ಕೇರಾ ಮತದಾರರು ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುವ ಪರಶುರಾಮನ ಕೈ ಹಿಡಿದಿದ್ದಾರೆ. ಕಕ್ಕೇರಾ ಪುರಸಭೆಯ ವಾರ್ಡ್ ನಂಬರ್ 6ರಿಂದ ಕಾಂಗ್ರೆಸ್‌ ಪಕ್ಷದಿಂದ ಪರಶುರಾಮ ಸ್ಪರ್ಧಿಸಿದ್ದ. ಇದೀಗ ಗೆಲುವು ಸಾಧಿಸಿದ್ದು, ಸಂತೋಷಗೊಂಡಿದ್ದಾನೆ.
Dec 30, 2021, 2:51 pm IST

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ ಚುನಾವಣೆಯಲ್ಲಿ ಸಹೋದರಿಯರು ವಿಜಯ ಪತಾಕೆ ಹಾರಿಸಿದ್ದಾರೆ. ನಗರಸಭೆಯ 33, 34ನೇ ವಾರ್ಡ್‌ಗಳಲ್ಲಿ ಸಹೋದರಿಯರಿಗೆ ಗೆಲುವು ಸಿಕ್ಕಿದೆ. 33ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಅಕ್ಕ ಪರಗಂಟಿ ಲಕ್ಷ್ಮಿ, 34ನೇ ವಾರ್ಡ್‌ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ತಂಗಿ ಲತಾ ಸಂತೋಷ್ ಗೆಲುವು ಸಾಧಿಸಿದ್ದಾರೆ.
Dec 30, 2021, 2:03 pm IST

ರಾಜ್ಯದ ಒಟ್ಟು 34 ಪಟ್ಟಣ ಪಂಚಾಯತ್‌ಗಳ 577 ಸ್ಥಾನಗಳ ಪೈಕಿ ಕಾಂಗ್ರೆಸ್- 236, ಬಿಜೆಪಿ- 194, ಜೆಡಿಎಸ್- 12 ಮತ್ತು 135 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
Dec 30, 2021, 2:02 pm IST

ರಾಜ್ಯದ ಒಟ್ಟು 19 ಪುರಸಭೆಗಳ 441 ಸ್ಥಾನಗಳ ಪೈಕಿ ಕಾಂಗ್ರೆಸ್- 201, ಬಿಜೆಪಿ- 176, ಜೆಡಿಎಸ್- 21 ಮತ್ತು 43 ಪಕ್ಷೇತರ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
Dec 30, 2021, 2:01 pm IST

5 ನಗರಸಭೆಗಳ ಚುನಾವಣಾ ಫಲಿತಾಂಶದ ಒಟ್ಟು 166 ಸ್ಥಾನಗಳ ಪೈಕಿ ಬಿಜೆಪಿಯ- 67, ಕಾಂಗ್ರೆಸ್‌ನ 61, ಜೆಡಿಎಸ್‌ನ 12 ಮತ್ತು 26 ಪಕ್ಷೇತರ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
Dec 30, 2021, 1:57 pm IST

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಇಂದು ಹೊರಬಿದ್ದಿದೆ. ಚುನಾವಣೆ ನಡೆದ 1187 ಸ್ಥಾನಗಳ ಪೈಕಿ 500ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆದ್ದಿದೆ. ಫಲಿತಾಂಶದಿಂದ ಜನಾಭಿಪ್ರಾಯ ನಮ್ಮ ಪರವಾಗಿದೆ ಎಂಬುದು ಕಂಡು ಬರುತ್ತದೆ. ಈ ಫಲಿತಾಂಶ ನಮಗೆ ಖುಷಿ ಕೊಟ್ಟಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
Dec 30, 2021, 1:57 pm IST

ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Dec 30, 2021, 1:56 pm IST

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಗಮನಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
Dec 30, 2021, 1:39 pm IST

ಕರ್ನಾಟಕ ಸ್ಥಳೀಯ ನಗರ ಸಂಸ್ಥೆ ಚುನಾವಣೆ ಫಲಿತಾಂಶ: ಒಟ್ಟು ನಗರಸಭೆ- 05 ಬಿಜೆಪಿ- 03 (ಚಿಕ್ಕಮಗಳೂರು, ಗದಗ-ಬೆಟಗೇರಿ, ಹೆಬ್ಬಗೋಡಿ) ಕಾಂಗ್ರೆಸ್- 01 (ಶಿರಾ) ಅತಂತ್ರ- 01 (ಹೊಸಪೇಟೆ
Dec 30, 2021, 1:28 pm IST

ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಡಾ.ಕೆ. ಸುಧಾಕರ್, ""ಇದು ಜಿಲ್ಲೆಯ ಜನತೆ ಅಭಿವೃದ್ಧಿ ಪರ ಇದ್ದಾರೆ ಎಂಬುದನ್ನು ಸಾಬೀತು ಪಡಿಸಿದೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಕಡೆಗಿನ ನಮ್ಮ ನಡೆಗೆ ಮತ್ತಷ್ಟು ಬಲ ನೀಡಿದೆ. ಪ್ರತಿಪಕ್ಷಗಳ ಕೆಲ ನಾಯಕರ ಅಪಪ್ರಚಾರಗಳಿಗೆ ಕಿವಿಗೊಡದೆ ಮತದಾರರು ಗಟ್ಟಿಯಾಗಿ ತಮ್ಮಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದಕ್ಕೆ ತುಂಬು ಹೃದಯದ ಧನ್ಯವಾದಗಳು,'' ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
Dec 30, 2021, 1:27 pm IST

ಮರು ಚುನಾವಣೆ ನಡೆದ ಮಂಚೇನಹಳ್ಳಿ ತಾಲೂಕಿನ ವರವಣಿ ಹಾಗೂ ರಾಯನಕಲು, ಚಿಕ್ಕಬಳ್ಳಾಪುರ ತಾಲೂಕು ಕಾರಿಗಾನಪಾಳ್ಯ, ಕಾಮಗಾನಹಳ್ಳಿ ಮತ್ತು ನಾಯನಹಳ್ಳಿ ಪಂಚಾಯತಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲಾ ಐವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
Dec 30, 2021, 1:27 pm IST

ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತಿ ಮರು ಚುನಾವಣೆಯ ಐದು ಕ್ಷೇತ್ರಗಳಲ್ಲಿ ಸಚಿವ ಡಾ. ಕೆ. ಸುಧಾಕರ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
Dec 30, 2021, 12:55 pm IST

ನಗರ ಮತ್ತು ಪಟ್ಟಣ ವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಕಡೆವಾಲಿದೆ ಎಂಬುದಕ್ಕೆ ಇಂದಿನ ಫಲಿತಾಂಶವೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Dec 30, 2021, 12:54 pm IST

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ಎಲ್ಲ ಮತದಾರರನ್ನೂ ಅಭಿನಂದಿಸುತ್ತೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಇದರ ಮಧ್ಯೆಯೂ ಜನ ಕಾಂಗ್ರೆಸ್ ಪರವಾಗಿ ಹೆಚ್ಚಿನ ಸ್ಥಾನಗಳನ್ನು ನೀಡಿದ್ದಾರೆ ಎಂದರೆ ರಾಜ್ಯದ ಜನರ ಭಾವನೆ ಕಾಂಗ್ರೆಸ್ ಪರವಾಗಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾತನಾಡಿದರು.
Dec 30, 2021, 12:54 pm IST

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಾಸಕರು ಇರುವ ಕಡೆ ಹೆಚ್ಚಿನ ಶಕ್ತಿ ಇರುತ್ತದೆ. ಆದರೆ, ಫಲಿತಾಂಶ ನೋಡಿದಾಗ ನಮ್ಮ ಶಾಸಕರು ಇಲ್ಲದ ಕಡೆಯೂ ಕಾರ್ಯಕರ್ತರು ಕಾಂಗ್ರೆಸ್ ಪರವಾಗಿ ಹೆಚ್ಚಿನ ಕೆಲಸ ಮಾಡಿ, ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ. ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Dec 30, 2021, 12:43 pm IST

ದಾಂಡೇಲಿ ನಗರಸಭೆಯಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುಗಂಧ ಪ್ರಕಾಶ್ ಕಾಂಬಳ್ಳೆ 466 ಮತ ಪಡೆದು, 306 ಮತಗಳಿಂದ ಗೆದ್ದಿದ್ದಾರೆ. ಬಿಜೆಪಿಯ ಪದ್ಮ ಅಶೋಕ್ ಬೋವಿ 165 ಮತ ಪಡೆದು ಪರಾಭವಗೊಂಡಿದ್ದಾರೆ.
Dec 30, 2021, 12:06 pm IST

ಗದಗ- ಬೆಟಗೇರಿ ನಗರಸಭೆ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 35 ವಾರ್ಡ್‌ಗಳಲ್ಲಿ 18 ವಾರ್ಡ್‌ಗಳಲ್ಲಿ ಬಿಜೆಪಿ ಗೆಲುವು. ಕಾಂಗ್ರೆಸ್ 15 ವಾರ್ಡ್‌ಗಳಲ್ಲಿ ಗೆಲುವು. ಪಕ್ಷೇತರರು 02 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ.
Dec 30, 2021, 12:02 pm IST

ಚಿಕ್ಕಮಗಳೂರು ನಗರಸಭೆಯಲ್ಲಿ 3ನೇ ಬಾರಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ. ಒಟ್ಟು 35 ವಾರ್ಡ್‌ಗಳಲ್ಲಿ 18 ವಾರ್ಡ್‌ಗಳಲ್ಲಿ ಬಿಜೆಪಿ ಗೆಲುವು. ಮ್ಯಾಜಿಕ್ ನಂಬರ್ 18 ತಲುಪಿದ ಬಿಜೆಪಿ.
Dec 30, 2021, 11:33 am IST

2023 ನಮ್ಮ ಪಕ್ಷದ ಸಂಘಟನಾ ವರ್ಷ, ಬಿಡದಿ ಸೇರಿದಂತೆ ರಾಜ್ಯದ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಸಾಧನೆ ನಮಗೆ ಮುಂದಿನ ಸಂಘಟನೆಗೆ ಹುಮ್ಮಸ್ಸು ಹೆಚ್ಚಿಸಿದೆ ಎಂದು ಮಾಜಿ ಸಿಎಂ ಎಚ್‌ಡಿಕೆ ತಿಳಿಸಿದರು.
Dec 30, 2021, 11:16 am IST

ಚಿಕ್ಕಮಗಳೂರು ನಗರಸಭೆಯ ಒಟ್ಟು 35 ವಾರ್ಡ್‌ಗಳ ಪೈಕಿ 23 ವಾರ್ಡ್‌ಗಳ ಫಲಿತಾಂಶ ಬಂದಿದ್ದು, ಕಾಂಗ್ರೆಸ್- 09, ಬಿಜೆಪಿ- 10, ಪಕ್ಷೇತರ- 02, ಜೆಡಿಎಸ್- 01, ಎಸ್‌ಡಿಪಿಐ- 01 ಅಭ್ಯರ್ಥಿಗಳು ಜಯ.
Dec 30, 2021, 11:13 am IST

ಕಾಗವಾಡ ತಾಲೂಕು ಐನಾಪುರ ಪಟ್ಟಣ ಪಂಚಾಯತಿಯ ಒಟ್ಟು 19 ವಾರ್ಡ್‌ಗಳಲ್ಲಿ ಕಾಂಗ್ರೆಸ್- 13, ಬಿಜೆಪಿ- 06 ಅಭ್ಯರ್ಥಿಗಳು ಜಯ.ಐನಾಪುರ ಪಟ್ಟಣ ಪಂಚಾಯತಿ ಕಾಂಗ್ರೆಸ್‌ಗೆ ತೆಕ್ಕೆಗೆ.
Dec 30, 2021, 11:12 am IST

ಮೂಡಲಗಿ ತಾಲೂಕು ಅರಭಾವಿ ಪಟ್ಟಣ ಪಂಚಾಯತಿಯ ಒಟ್ಟು 16 ವಾರ್ಡ್‌ಗಳಲ್ಲಿ ಕಾಂಗ್ರೆಸ್- 0, ಬಿಜೆಪಿ- 05, ಪಕ್ಷೇತರ- 11 ಜಯ. ಬಾಲಚಂದ್ರ ಜಾರಕಿಹೋಳಿ ಬೆಂಬಲಿತ ಪಕ್ಷೇತರ ಪಾಲಾದ ಅರಭಾವಿ ಕ್ಷೇತ್ರ.
Dec 30, 2021, 11:08 am IST

ವಿಜಯನಗರ ಜಿಲ್ಲೆಯಾದ ಬಳಿಕ ಹೊಸಪೇಟೆ ನಗರಸಭೆಗೆ ಮೊದಲ ಬಾರಿ ಚುನಾವಣೆ ನಡೆದಿದ್ದು, ಒಟ್ಟು 35 ವಾರ್ಡ್‌ಗಳಲ್ಲಿ ಬಿಜೆಪಿ- 10, ಪಕ್ಷೇತರ- 12, ಕಾಂಗ್ರೆಸ್- 12, ಆಮ್ ಆದ್ಮಿ- 01 ಅಭ್ಯರ್ಥಿಗಳು ಜಯ.
Dec 30, 2021, 11:06 am IST

ಗದಗ- ಬೆಟಗೇರಿ ನಗರಸಭೆ ಚುನಾವಣೆ ಫಲಿತಾಂಶ ಮುಕ್ತಾಯವಾಗಿದ್ದು, ಒಟ್ಟು 35 ವಾರ್ಡ್‌ಗಳ ಪೈಕಿ ಕಾಂಗ್ರೆಸ್- 12, ಬಿಜೆಪಿ- 15, ಪಕ್ಷೇತರ- 2 ಅಭ್ಯರ್ಥಿಗಳು ಜಯ.
Dec 30, 2021, 11:04 am IST

ರಾಜ್ಯದ 19 ಪುರಸಭೆಗಳ ಪೈಕಿ ಕಾಂಗ್ರೆಸ್ 7, ಬಿಜೆಪಿ 5 ಪುರಸಭೆಗಳಲ್ಲಿ ಅಧಿಕಾರ.
Dec 30, 2021, 11:03 am IST

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶ ಅತಂತ್ರವಾಗಿದೆ. ಒಟ್ಟು 19 ಸ್ಥಾನಗಳಿದ್ದು, ಬಿಜೆಪಿ 9, ಕಾಂಗ್ರೆಸ್ 7, ಇತರೆ 3 ವಾರ್ಡ್‌ನಲ್ಲಿ ಗೆಲುವು ಸಾಧಿಸಿದೆ.
Dec 30, 2021, 10:59 am IST

ಕೊಪ್ಪಳ ಜಿಲ್ಲೆಯ ಕಾರಟಗಿ ಪುರಸಭೆಯ 23 ಸ್ಥಾನಗಳ ಫಲಿತಾಂಶ ಮುಕ್ತಾಯವಾಗಿದ್ದು, ಬಿಜೆಪಿ- 11, ಕಾಂಗ್ರೆಸ್- 11, ಪಕ್ಷೇತರ-1 ಸ್ಥಾನಗಳಲ್ಲಿ ಜಯಿಸಿದ್ದು, ಕಾರಟಗಿ ಪುರಸಭೆ ಅತಂತ್ರವಾಗಿದೆ. ಕಾರಟಗಿ ಶಾಸಕ ಬಸವರಾಜ ದಡೇಸೂಗುರ್ ವ್ಯಾಪ್ತಿಯ ಕಾರಟಗಿ ಪುರಸಭೆ.
Dec 30, 2021, 10:54 am IST

ರಾಜ್ಯದ 34 ಪಟ್ಟಣ ಪಂಚಾಯತ್‌ನ 557 ವಾರ್ಡ್‌ಗಳಲ್ಲಿ ಕಾಂಗ್ರೆಸ್- 205, ಬಿಜೆಪಿ- 150, ಜೆಡಿಎಸ್- 12, ಪಕ್ಷೇತರ- 114 ವಾರ್ಡ್‌ಗಳಲ್ಲಿ ಜಯ.
READ MORE

Recommended Video

      IndiGo ವಿಮಾನದಲ್ಲಿ ಕೇಳಿಬಂತು ತುಳುಭಾಷೆಯಲ್ಲಿ ಅನೌನ್ಸ್ಮೆಂಟ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+