VAO Exam Scam: ಮೊಬೈಲ್ ಬಳಸಿ ಪರೀಕ್ಷೆ ಬರೆದ ಆರೋಪ; ವಿಎಓ ರ‍್ಯಾಂಕ್ ಅಭ್ಯರ್ಥಿ ಪೊಲೀಸರ ವಶಕ್ಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಗ್ರಾಮ ಆಡಳಿತಾಧಿಕಾರಿ (ವಿಎಓ) 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಹಾವೇರಿಯ ಶಂಕರ ಬನ್ನೂರು ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ಕ್ರಮಕ್ಕೆ ಕರ್ನಾಟಕ ಸ್ವಾಭಿಮಾನಿ ವಿದ್ಯಾರ್ಥಿ ಸಮೂಹ (KSVS) ಹರ್ಷ ವ್ಯಕ್ತಪಡಿಸಿದೆ.

ಗ್ರಾಮ ಆಡಳಿತಾಧಿಕಾರಿ (ವಿಎಓ) ಪರೀಕ್ಷೆಯಲ್ಲಿ 151.25 ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದ ಈ ಅಭ್ಯರ್ಥಿಯನ್ನು ಹಾನಗಲ್ ಠಾಣೆ ಪೊಲೀಸರು ಹಾಗೂ ಶಿಗ್ಗಾವಿ ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಈತ ಮೊಬೈಲ್ ಬಳಸಿ ಪರೀಕ್ಷೆ ಬರೆದಿರುವುದು ಉಪ ವಿಭಾಗಾಧಿಕಾರಿ ವಿಚಾರಣೆಯಿಂದ ಬೆಳಕಿಗೆ ಬಂದ ಬಳಿಕ ವಶಕ್ಕೆ ಪಡೆಯಲಾಗಿದೆ ಎಂದು ಕೆಇಎ ಮೂಲಗಳು ತಿಳಿಸಿವೆ.

Karnataka VAO Exam Scam

ಪಿಯುಸಿ ಮುಗಿಸಲು 13 ವರ್ಷ ಪಡೆದಿದ್ದ ಈತ, ಅದನ್ನು 2026ರಲ್ಲಿ ಕಡಿಮೆ ಅಂಕಗಳಿಂದ ಪಾಸಾಗಿದ್ದ. ನಂತರ ಇತ್ತೀಚೆಗೆ ನಡೆದ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಯಲ್ಲೂ ಅತೀ ಕಡಿಮೆ ಅಂಕದೊಂದಿಗೆ ಅನುತ್ತೀರ್ಣವಾಗಿದ್ದ. ಅದಾದ ಬಳಿಕ ಕೆಲವೇ ದಿನಗಳಲ್ಲಿ ನಡೆದ ಈ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಅದೇಗೆ ಅಷ್ಟು ಅಂಕ ಪಡೆದಿದ್ದಾನೆ ಎಂದು ವಿದ್ಯಾರ್ಥಿ ಸಂಘಟನೆಗಳು, ಇತರ ಅಭ್ಯರ್ಥಿಗಳು ದಾಖಲೆ ಸಮೇತ ಆರೋಪಿಸಿದ್ದಾರೆ. ಈ ಅಕ್ರಮ ವಿರುದ್ಧ ತನಿಖೆಗೆ ಆಗ್ರಹಿಸಿದ್ದರು. ಅದರಂತೆ ಆ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತದೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬ ಸತ್ಯ ತಿಳಿಸುವಂತೆ ಒತ್ತಾಯವು ಜೋರಾಗಿದೆ.

KSVS ಹೇಳಿದ್ದೇನು?

ವಿಎಓ ಪರೀಕ್ಷೆ ಸಂಬಂಧ ಕರ್ನಾಟಕ ಸ್ವಾಭಿಮಾನಿ ವಿದ್ಯಾರ್ಥಿ ಸಮೂಹ (KSVS) ಮಾಡಿದ ಆರೋಪಗಳು ಸುಳ್ಳಾಗಲಿಲ್ಲ. ಹಲವು ಬಾರಿ ಪರಿಶೀಲಿಸಿ, ಸೂಕ್ತ ದಾಖಲೆಗಳನ್ನು ಸಂಗ್ರಹಿಸಿದ ಬಳಿಕವೇ ನಾವು ಅಕ್ರಮದ ವಿರುದ್ಧ ಧ್ವನಿ ಎತ್ತಿದ್ದೇವೆ ಎಂದು ತಿಳಿಸಿದೆ.

ಹಗಲು-ರಾತ್ರಿ ಶ್ರಮಿಸುವ ಪ್ರಾಮಾಣಿಕ ವಿದ್ಯಾರ್ಥಿಗಳ ಪರವಾಗಿ ನಮ್ಮ ಹೋರಾಟ ಸದಾ ಮುಂದುವರಿಯಲಿದೆ. ಯಾರಿಗೂ ಅನ್ಯಾಯವಾಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಪರೀಕ್ಷೆಗಳನ್ನು ನಡೆಸಲಿ.

ಕೆಇಎ, ಪೊಲೀಸರಿಗೆ ಅಭಿನಂದನೆ

ಅಕ್ರಮದ ಅಂಶಗಳನ್ನು ಹೊರತರುವಲ್ಲಿ ಶ್ರಮಿಸಿದ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರಾದ ಎಚ್. ಪ್ರಸನ್ನ ಅವರಿಗೆ ಹೃತ್ಪೂರ್ವಕ ಧನ್ಯವಾದಗಳುನ್ನು ಸಂಘಟನೆ ತಿಳಿಸಿದೆ. ನಮ್ಮ ಹೋರಾಟ ಅನ್ಯಾಯದ ವಿರುದ್ಧ, ಪ್ರಾಮಾಣಿಕ ವಿದ್ಯಾರ್ಥಿಗಳ ಪರವಾಗಿ! ಸದಾ ನಿರಂತರವಾಗಿ ಮುಂದುವರಿಯಲಿದೆ.

ಯಾವುದೇ ವಿದ್ಯಾರ್ಥಿಗಳು ದಯವಿಟ್ಟು ನಿಮ್ಮ ಪ್ರತಿಬೆಯನ್ನು ನಂಬಿ ಅಕ್ರಮದ ಹಾದಿ ಬೇಡ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ. ಬದುಕಲು ಸ್ಪರ್ಧಾತ್ಮಕ ಪರೀಕ್ಷೆ ಒಂದೇ ದಾರಿಯಲ್ಲಿ ಅದರ ಆಚೆಗೂ ಹಲವಾರು ಉತ್ತಮ ಅವಕಾಶಗಳಿವೆ ಎಂದು ಕರ್ನಾಟಕ ಸ್ವಾಭಿಮಾನಿ ವಿದ್ಯಾರ್ಥಿ ಸಮೂಹ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+