ಕಾಂಗ್ರೆಸ್‌ಗೆ ಅಧಿಕೃತ ಬೆಂಬಲ ಘೋಷಿಸಿದ ಕರ್ನಾಟಕ ವೀರಶೈವ ಲಿಂಗಾಯತ ವಿಚಾರ ವೇದಿಕೆ- 'ಕೈ'ಗೆ ಮತ ನೀಡಲು ಮನವಿ

ಬೆಂಗಳೂರು, ಮೇ 07: ಕರ್ನಾಟಕ ವೀರಶೈವ ಲಿಂಗಾಯತ ವೇದಿಕೆಯು ಮೇ 10 ರಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತನ್ನ ಬೆಂಬಲವನ್ನು ನೀಡುವುದಾಗಿ ಅಧಿಕೃತ ಪತ್ರವನ್ನು ಬಿಡುಗಡೆ ಮಾಡಿದೆ. ಲಿಂಗಾಯತ ಸಮುದಾಯದ ಜನರು ಕಾಂಗ್ರೆಸ್‌ಗೆ ಮತ ನೀಡುವಂತೆ ವೇದಿಕೆ ಮನವಿ ಮಾಡಿದೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಕೆ ವಿ ನಾಗರಾಜಮೂರ್ತಿ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಲಿಂಗಾಯತರನ್ನು ಕಡೆಗಣಿಸಿದೆ. ನಾವು ಹಿಂದುತ್ವದಲ್ಲಿ ನಂಬಿಕೆ ಇರುವವರು. ಹಿಂದುತ್ವದಲ್ಲೇ ಮುಂದುವರಿಯುತ್ತೇವೆ. ನಮಗೆ ಲಿಂಗಾಯತರ ಅವಶ್ಯಕತೆ ಇಲ್ಲ. ಇನ್ನೆಷ್ಟು ದಿನ ಲಿಂಗಾಯತರನ್ನು ಓಲೈಸಿಕೊಂಡಿರಬೇಕು ಎಂದು ಹೇಳುವ ಮೂಲಕ ಅಹಂಕಾರದ ಮಾತುಗಳನ್ನಾಡಿದ್ದಾರೆ' ಎಂದು ಆರೋಪಿಸಿದರು.

Karnataka Veerashaiva Lingayat forum issued an official letter extending its support to Congress

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಲಿಂಗಾಯತರನ್ನು ಕಡೆಗಣಿಸುತ್ತಲೇ ಇದೆ. ಪಠ್ಯಪುಸ್ತಕದಲ್ಲಿ ವಚನಕಾರರನ್ನು ಕಡೆಗಣಿಸಿದರು. ವಚನ ಸಾಹಿತ್ಯವನ್ನು ಕೈಬಿಟ್ಟರು. ಬಸವಣ್ಣನ ವಿಚಾರಧಾರೆಗಳನ್ನು ತಿರುಚಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Karnataka Veerashaiva Lingayat forum issued an official letter extending its support to Congress

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಚನ ಸಂಗೀತೋತ್ಸವವನ್ನು ಕೈಬಿಡಲಾಗಿದೆ. ಈ ಸಂಗೀತೋತ್ಸವಕ್ಕೆ ಮೀಸಲಿರಿಸಲಾಗಿದ್ದ 90 ಲಕ್ಷ ರೂಪಾಯಿಗಳನ್ನು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಸುನೀಲ್‌ ಕುಮಾರ್‌ ಅವರು ಕಾರ್ಕಳ ಉತ್ಸವಕ್ಕೆ ಬಳಸಿಕೊಂಡರು ಎಂದು ಗಂಭೀರವಾಗಿ ಆರೋಪಿಸಿದರು.

Karnataka Veerashaiva Lingayat forum issued an official letter extending its support to Congress

ರಾಜ್ಯದಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ, ಲಿಂಗಾಯತ ನಾಯಕ ಬಿ ಎಸ್‌ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಕೆಳಗಿಳಿಸಲಾಯಿತು. ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ಕೈ ತಪ್ಪುವಂತೆ ಮಾಡಲಾಯಿತು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೂ ಟಿಕೆಟ್‌ ಕೈ ತಪ್ಪುವಂತೆ ಮಾಡಿದರು. ಅವರು ಬಿಜೆಪಿಯನ್ನು ತೊರೆಯುವಂತೆ ಮಾಡಲಾಯಿತು. ಆಯನೂರು ಮಂಜುನಾಥ, ಸೊಗಡು ಶಿವಣ್ಣ ಹಾಗೂ ಸಂಜಯ್‌ ಪಾಟೀಲ್‌ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ವೀರಶೈವ ಹಾಗೂ ಲಿಂಗಾಯತ ಸಮುದಾಯವನ್ನು ಬಿಜೆಪಿ ಅನ್ಯಾಯ ಮಾಡಿದೆ. ಈ ಹಿನ್ನೆಲೆಯಲ್ಲಿ ನಾವು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಳಿಕೊಳ್ಳುತ್ತಿವೆ. ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬೇಕಿದೆ. ಈ ಮೂಲಕ ಸಮುದಾಯದವರು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು.

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶವು ಮೇ 13 ರಂದು ಹೊರಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+