Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಟ್ಟ ಮಂಜು, ಶೀತಗಾಳಿ ಮುಂದುವರೆಯುವ ಮುನ್ಸೂಚನೆ
Karnataka Weather: ರಾಜ್ಯದಲ್ಲಿ ಚಳಿ ಪ್ರಮಾಣ ಮತ್ತೆ ಹೆಚ್ಚಾಗುತ್ತಲಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 20) ಬೆಳಗ್ಗೆ ಕೂಡ ದಟ್ಟ ಮಂಜು, ಶೀತಗಾಳಿ ವಾತಾವರಣ ಮುಂದುವರೆದಿತ್ತು. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ನಗರದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜು, ಚಳಿ ಹೆಚ್ಚಿರಲಿದೆ ಎಂದು ಮನ್ಸೂಚನೆ ನೀಡಿದೆ. ಇನ್ನೂ ಇಂದು ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ ಎಂದು ತಿಳಿಸಿದೆ.

ಕೆಳೆದ ಕೆಲವು ದಿನಗಳಿಂದ ನಗರದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಪರಿಣಾಮ ಬೆಳಗ್ಗೆ ಹಾಗೂ ಸಂಜೆ ವೇಳೆ ಜನರು ಮನೆಯಿಂದ ಹೊರಗಡೆ ಬರಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಶೀತಗಾಳಿ ಬೀಸಲಿದೆ ಎಂದು ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ರವಾನೆ ಮಾಡಿದೆ.
ಶೀತಗಾಳಿ ಜೊತೆ ಒಣಹವೆ ಮುಂದುವರಿಕೆ: ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಚಳಿಗಾಳಿ ಬೀಸಲಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಭೀಕರ ಚಳಿಗಾಳಿ ಮುನ್ಸೂಚನೆ: ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭೀಕರ ಚಳಿಗಾಳಿ ಬೀಸಲಿದೆ. ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಶೀತಗಾಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಭಾರೀ ಚಳಿ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದಾರೆ.
ಫೆಬ್ರವರಿ ಎಂಟ್ರಿ ಕೊಡುತ್ತಿದ್ದಂತೆ ಚಳಿ ಪ್ರಮಾಣ ತಗ್ಗಲಿದ್ದು, ಬೇಸಿಗೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಇದೆ. ಬಳಿಕ ಈ ಬಾರಿಯೂ ವಾಡಿಕೆಯಂತೆ ಮುಂಗಾರು ಜೂನ್ ಆರಂಭದಲ್ಲಿ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಇದೆ. ಮುಂಗಾರು ಮೊದಲು ಕೇರಳಕ್ಕೆ ಎಂಟ್ರಿ ಕೊಡಲಿದೆ ಬಳಿಕ ಕರ್ನಾಟಕಕ್ಕೆ ಆಗಮಿಸಲಿದೆ. ತದನಂತರ ದೇಶಾದ್ಯಂತ ವ್ಯಾಪಿಸುವ ಸಾಧ್ಯತೆಯಿದೆ. ಯಾಕಂದ್ರೆ ಪ್ರತಿ ಬಾರಿಯೂ ಸಹ ಮೊದಲು ಮುಂಗಾರು ಪ್ರವೇಶ ಕೊಡುವುದೇ ಕೇರಳಕ್ಕೆ, ಬಳಿಕ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳನ್ನು ಆವರಿಸಲಿದೆ.
ರಾಜ್ಯದಲ್ಲಿ ಕಳೆದ ಬಾರಿ ಉತ್ತಮ ಮಳೆಯಾದ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿಹರಿದಿದ್ದವು. ಅಷ್ಟೇ ಅಲ್ಲದೆ, ಬಹುತೇಕ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿದ್ದು, ನೀರಿನ ಅಭಾವ ಎದುರಾಗಂತೆ ಆಗಿತ್ತು. ಇದರಿಂದ ರೈತರ ಮುಖದಲ್ಲಿ ಮಂದಹಾಸ ಹೆಚ್ಚಾಗಿತ್ತು. ಇನ್ನೂ ಈ ಬಾರಿ ಏನಾಗಲಿದೆಯೋ ಎನ್ನುವ ಯೋಚನೆಯಲ್ಲಿ ಅನ್ನದಾತರಿದ್ದಾರೆ. ಯಾಕಂದ್ರೆ, ಈಗಾಗಲೇ ಬಹುತೇಕ ಸಣ್ಣ-ಪುಟ್ಟ ಕೆರೆಗಳಲ್ಲಿ ನೀರು ಖಾಲಿಯಾಗಿವೆ. ಇವುಗಳು ಮತ್ತೆ ಯಾವಾಗ ತುಂಬುತ್ತವೆಯೋ ಎನ್ನುವ ಯೋಚನೆಯಲ್ಲಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications