Karnataka Weather Alert: ಆಗ್ನೇಯ ಅರಬ್ಬಿ ಸಮುದ್ರ ಭಾಗದಲ್ಲಿ ಚಂಡಮಾರುತ ಪರಿಚಲನೆ: ಕರ್ನಾಟಕದಲ್ಲಿ ಮಳೆ ಸಾಧ್ಯತೆ
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಳಿ ಪ್ರಮಾಣ ಅಲ್ಪ ಇಳಿಕೆಯಾಗಿದ್ದು, ಒಣಹವೆ ಮುಂದುವರಿದಿದೆ. ಮುಂದಿನ ಐದು ದಿನಗಳ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಪೂರ್ವ ಪ್ರದೇಶದ ಟ್ರಫ್ ದಕ್ಷಿಣ ಕೇರಳದಿಂದ ದಕ್ಷಿಣ ಕರ್ನಾಟಕದ ಕರಾವಳಿಗೆ ಸರಾಸರಿ ಸಮುದ್ರ ಮಟ್ಟದಿಂದ 9 ಕಿಮೀ. ಎತ್ತರದಲ್ಲಿದೆ. ಲಕ್ಷದ್ವೀಪ ಪ್ರದೇಶಕ್ಕೆ ಹೊಂದಿಕೊಂಡಿರುವ ಆಗ್ನೇಯ ಅರಬ್ಬಿ ಸಮುದ್ರ ಮತ್ತು ಕೇರಳ ಕರಾವಳಿಯ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 9 ಕಿ.ಮೀ ಎತ್ತರದಲ್ಲಿದೆ. ಕೊಮೊರಿನ್ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 1.5 ಕಿ.ಮೀವರೆಗೆ ವಿಸ್ತರಿಸಿರುವ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯು ಕಡಿಮೆ ಗುರುತಿಸಲ್ಪಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಈ ವಾರ ಸಾಧಾರಣ ಮಳೆ ಆಗುವ ಸಾಧ್ಯತೆಯೂ ಇದೆ.

Karnataka Weather Alert: ತಾಪಮಾನ ಬದಲಾವಣೆ
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ವರೆಗೆ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ. ಹೀಗಾಗಿ ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ. ಇನ್ನು ಮುಂದಿನ ಐದು ದಿನಗಳವರೆಗೆ ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲಿ ಚಳಿ ಮುಂದುವರಿದಿದ್ದು, ಮಧ್ಯಾಹ್ನ ಅಲ್ಪ ಪ್ರಮಾಣದಲ್ಲಿ ಬಿಸಿಲು ಇದೆ. ಮುಂದಿನ ಐದು ದಿನಗಳ ವರೆಗೆ ಬೆಂಗಳೂರಿನಲ್ಲಿ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳ ವರೆಗೆ: ಮುಂದಿನ 24 ಗಂಟೆಗಳ ವರೆಗೆ ಬೆಂಗಳೂರಿನಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆ ಅವಧಿಯಲ್ಲಿ: ಇನ್ನು ಮುಂದಿನ 48 ಗಂಟೆಗಳ ವರೆಗೆ ಬೆಂಗಳೂರಿನಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (-3.1 ಡಿಗ್ರಿ ಸೆಲ್ಸಿಯಸ್‌ನಿಂದ ನಿಂದ - 5.0 ಡಿಗ್ರಿ ಸೆಲ್ಸಿಯಸ್) ನಷ್ಟು ಕಡಿಮೆ ಆಗಿದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ [1.6 ಡಿಗ್ರಿ ಸೆಲ್ಸಿಯಸ್ ನಿಂದ - 3.0 ಡಿಗ್ರಿ ಸೆಲ್ಸಿಯಸ್) ಕಡಿಮೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ (1.6 ಡಿಗ್ರಿ ಸೆಲ್ಸಿಯಸ್ ನಿಂದ 3.0 ಡಿಗ್ರಿ ಸೆಲ್ಸಿಯಸ್)ಹೆಚ್ಚಾಗಿದೆ. ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ (3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್) ಭಾರೀ ಹೆಚ್ಚಾಗಿದೆ ಮತ್ತು ಉಳಿದ ಸ್ಥಳಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.
ಇನ್ನು ಕನಿಷ್ಠ ತಾಪಮಾನವು ದಕ್ಷಿಣ ಒಳನಾಡಿನ ಚಿಂತಾಮಣಿಯಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇದೆ. ಉತ್ತರ ಒಳನಾಡಿನ ಬೀದರ್, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಹಾಸನದಲ್ಲಿ ಸಾಮಾನ್ಯಕ್ಕಿಂತ ಕಡಿಮೆ. ದಕ್ಷಿಣ ಒಳನಾಡಿನ ಶಿವಮೊಗ್ಗದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಗಣನೀಯವಾಗಿ ಹೆಚ್ಚು ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯವಾಗಿತ್ತು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications