Karnataka Rain: ತಾಪಮಾನ ಕುಸಿತ, ಮೈ ನಡುಗುವ ಚಳಿ ಜೊತೆ ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ
ತಮಿಳುನಾಡು ಕರಾವಳಿಗೆ ದಿತ್ವಾ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದೆ. ಮತ್ತೊಂದೆಡೆ ಮೈಕೊರೆಯುವ ಚಳಿ ಹಾಗೂ ಮೋಡ ಕವಿದ ವಾತಾವರಣ ಕೂಡ ಇದೆ. ಈ ಹವಾಮಾನ ವೈಪರೀತ್ಯದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಂಪಾದ ವಾತಾವರಣವಿದ್ದು, ಚಳಿಗೆ ಜನ ಮನೆಯಿಂದ ಹೊರಬರಲು ಹೆದರುವಂತಾಗಿದೆ. ಚಂಡಮಾರುತ ಪ್ರಭಾವದಿಂದ ಭಾನುವಾರದಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆ ಕಾಣಲಿದೆ. ಮುಂದಿನ 5 ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ. ರಾಜ್ಯದ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ವರದಿಯಾಗಿದೆ. ಬಯಲು ಪ್ರದೇಶಗಳಲ್ಲಿ ವಿಜಯಪುರ ಮತ್ತು ಬೀದರ್‌ನಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಇದರೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 24 ಡಿಗ್ರಿ ಸೆಲ್ಸಿಯಸ್ ಮತ್ತು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ?
ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳು. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ದಿತ್ವಾ ಚಂಡಮಾರುತವು ಬಂಗಾಳಕೊಲ್ಲಿಯ ನೈರುತ್ಯ ಮತ್ತು ಶ್ರೀಲಂಕಾದ ಪಕ್ಕದಲ್ಲಿರುವ ಉತ್ತರ ಭಾಗದಲ್ಲಿ ಗಂಟೆಗೆ 8 ಕಿ.ಮೀ ವೇಗದಲ್ಲಿ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುತ್ತಿದೆ. ಪುದುಚೇರಿಯಿಂದ 280 ಕಿ.ಮೀ. ಆಗ್ನೇಯಕ್ಕೆ ಮತ್ತು ಚೆನ್ನೈನಿಂದ 380 ಕಿ.ಮೀ. ದಕ್ಷಿಣಕ್ಕೆ ಇದ್ದು, ಇದು ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ.
ನವೆಂಬರ್ 30ರಂದು ಈ ಚಂಡಮಾರುತವು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಬಳಿ ನೈರುತ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹೇಳಿದೆ. ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವಾಗ ನವೆಂಬರ್ 30ರ ಹೊತ್ತಿಗೆ ಕ್ರಮವಾಗಿ ತಮಿಳುನಾಡು ಕರಾವಳಿಯಿಂದ ಕನಿಷ್ಠ 60 ಕಿ.ಮೀ ವ್ಯಾಪ್ತಿಯಲ್ಲಿ ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಕೇಂದ್ರೀಕೃತವಾಗಿರುತ್ತದೆ.












Click it and Unblock the Notifications