Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಒಂದೆರಡು ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಕಡೆಗಳಲ್ಲಿ ಅಲ್ಲಲ್ಲಿ ಮಳೆ ನಿರೀಕ್ಷೆ ಇದೆ. ವಿಶೇಷವೆಂದರೆ ರಾಜ್ಯದ ಗರಿಷ್ಠ ತಾಪಮಾನ ಏರಿಕೆ ಆಗುತ್ತಿದ್ದು, ಎಲ್ಲೆಡೆ 'ಉಷ್ಣಅಲೆ' ನಿರೀಕ್ಷೆ ಇದೆ. ಈಗಾಗಲೇ ಕರಾವಳಿ ಸೇರಿ ಕೆಲವು ಜಿಲ್ಲೆಗಳಿಗೆ ಉಷ್ಣ ಅಲೆ (Heat Wave) ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ ಒಂದು ವಾರ (ಏಪ್ರಿಲ್ 20) ರಾಜ್ಯದಲ್ಲಿ ಬಿಸಿಲು ಮತ್ತು ಮಳೆ ಮಿಶ್ರಿತ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಏಪ್ರಿಲ್ 14ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮತ್ತೆ ಅಬ್ಬರಿಸಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣವಾಗಿ ಸುರಿಯಲಿದ್ದು, ಒಣಹವೆ ಮೇಲುಗೈ ಸಾಧಿಸಲಿದೆ. ಉತ್ತರ ಕರ್ನಾಟಕ, ಕರಾವಳಿ ಹಾಗೂ ಕೆಲವು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಬರಲಿದೆ. ಮಾತ್ರವಲ್ಲದೇ ಕಳೆದ ಎರಡು ದಿನಗಳಲ್ಲಿ ರಾಜ್ಯ ವಿವಿಧೆಡೆ ಗರಿಷ್ಠ ತಾಪಮಾನದಲ್ಲಿ ಸುಮಾರು 1-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದ್ದು. ಇದೇ ಸ್ಥಿತಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಐಎಂಡಿ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಬಿಸಿಲು ಮಳೆ ಮುನ್ಸೂಚನೆ
ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ಏಪ್ರಿಲ್ 15ರವರೆಗೆ ಎರಡು ದಿನ ಅತ್ಯಧಿಕ ಬಿಸಿಲು ಕಂಡು ಬರಲಿದೆ. ಗರಿಷ್ಠ ತಾಪಮಾನ ಏರಿಕೆ ಆಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆ ಒಳಗೊಂಡಂತೆ ಮೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯು ಆಗಲಿದೆ. ನಂತರ ಏಪ್ರಿಲ್ 20ರವರೆಗೆ ಕರಾವಳಿಯಲ್ಲಿ ಮತ್ತೆ ಮಳೆ ತೀವ್ರ ಹೆಚ್ಚಾಗುವ ಸಾಧ್ಯತೆ ಇದ್ದು, ವ್ಯಾಪಕ ಮಳೆ ನಿರೀಕ್ಷೆ ಇದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಭಾಗದಲ್ಲಿ ಮುಂದಿನ ಒಂದು ವಾರ ಹಗುರದಿಂದ ಸಾಧಾರಣವಾಗಿ ಗುಡುಗು ಸಹಿತ ವ್ಯಾಪಕ ಮಳೆ ಆಗಲಿದೆ. ಇದರಲ್ಲಿ ಏಪ್ರಿಲ್ 16ರಿಂದ ಮೂರು ದಿನ ಕಲಬುರಗಿ, ವಿಜಯಪುರ, ಬೆಳಗಾವಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ 'ಉಷ್ಣಅಲೆ" ನಿರ್ಮಾಣವಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಒಳನಾಡು ಜಿಲ್ಲೆಗಳಲ್ಲಿ ಮಳೆ, ಉರಿಬಿಸಿಲು
ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಹಗುರದಿಂದ ಸಾಧಾರಣೆ ಮಳೆ ಸಂಭವವಿದೆ. ಇನ್ನುಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ತುಮಕೂರು ಭಾಗಗಳಲ್ಲಿ ಬಿಸಿಲು ಹೆಚ್ಚಿರಲಿದೆ. ಒಟ್ಟಾರೆ ರಾಜ್ಯದಲ್ಲಿ ಏಳು ದಿನ ಅಲ್ಲಲ್ಲಿ ಮಳೆ ಆಗುವುದರ ಜೊತೆಗೆ ಅತ್ಯಧಿಕ ಗರಿಷ್ಠ ತಾಪಮಾನ ಕಂಡು ಬರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ತಮಿಳುನಾಡು, ಕರ್ನಾಟಕ ಕರಾವಳಿ ಭಾಗಕ್ಕೆ ಸಮೀಪದಲ್ಲಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಇದರ ಪರಿಣಾಮ ಪೂರ್ವ ಮುಂಗಾರು ಮಳೆ ಚುರುಕಾಗಿದೆ. ಆದರೆ ಸದ್ಯಕ್ಕೆ ಜೋರು, ಭಾರೀ ಮಳೆ ಲಕ್ಷಣಗಳು ಇಲ್ಲ ಎನ್ನಲಾಗಿದೆ.
ರಾಜ್ಯದ ಗರಿಷ್ಠ ತಾಪಮಾನದ ಜಿಲ್ಲೆಗಳಿವು
ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ರಾಜ್ಯದ ಗರಿಷ್ಠ ತಾಪಮಾನ ದಾಖಲಾಗಿದೆ. ಉಳಿದಂತೆ ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ. ಗದಗ, ಬಾಗಲಕೋಟೆ, ಗಂಗಾವತಿ, ತುಮಕೂರು ಭಾಗಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಲಕ್ಷಣಗಳಿವೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?













Click it and Unblock the Notifications