Karnataka Weather Alert: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಅ.9ರಿಂದ ಭಾರೀ ಮಳೆ; ಅ.13ರವರೆಗೆ ಮುನ್ಸೂಚನೆ
Karnataka Weather Alert: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ನಾಳೆಯಿಂದ ಕರ್ನಾಟಕ ವಿವಿಧ ಪ್ರದೇಶದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಅಕ್ಟೋಬರ್ 9ರ ಶುಕ್ರವಾರದಿಂದ ಭಾರೀ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ತುಮಕೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಮಾರುತಗಳ ಹಿಮ್ಮೆಟ್ಟುವಿಕೆಯ ರೇಖೆಯು 27.5°N/86.5°E, ಸುಪೌಲ್, ರಾಂಚಿ, ರಾಯಪುರ, ಬ್ರಹ್ಮಪುರಿ, ಪರಭಣಿ, ಬಾರಾಮತಿ, ಹರ್ನ್ಸ್ ಮತ್ತು 17.5°N/71.8°E ಮೂಲಕ ಹಾದು ಹೋಗುವುದನ್ನು ಮುಂದುವರಿಸಿದೆ. ಮನ್ನಾರ್ ಕೊಲ್ಲಿಯಿಂದ ಮಧ್ಯ ಮಹಾರಾಷ್ಟ್ರದವರೆಗೆ ಇದ್ದ ವಾಯುಭಾರ ಕುಸಿತದ ಪಟ್ಟಿ (trough) ಈಗ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಮನ್ನಾರ್ ಕೊಲ್ಲಿಯಿಂದ ತಮಿಳುನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಮೂಲಕ ಉತ್ತರ ಒಳನಾಡು ಕರ್ನಾಟಕದವರೆಗೆ ವಿಸ್ತರಿಸಿದೆ.
ಉಪ-ಹಿಮಾಲಯದ ಪಶ್ಚಿಮ ಬಂಗಾಳದಿಂದ ಕೊಂಕಣ ಮತ್ತು ಗೋವಾ ಪ್ರದೇಶದವರೆಗೆ ಇದ್ದ ವಾಯುಭಾರ ಕುಸಿತದ ಪಟ್ಟಿ ಈಗ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ಉಪ-ಹಿಮಾಲಯದ ಪಶ್ಚಿಮ ಬಂಗಾಳದಿಂದ ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ವಿದರ್ಭ, ಮರಾಠವಾಡ ಮತ್ತು ಉತ್ತರ ಒಳನಾಡು ಕರ್ನಾಟಕದ ಮೂಲಕ ದಕ್ಷಿಣ ಒಳನಾಡು ಕರ್ನಾಟಕದವರೆಗೆ ವಿಸ್ತರಿಸಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ಅದನ್ನು ಹೊಂದಿಕೊಂಡಿರುವ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿದ್ದ ಮೇಲೆ ಸುಳಿಗಾಳಿ (cyclonic circulation) ಈಗ ದುರ್ಬಲಗೊಂಡಿದೆ. ದಕ್ಷಿಣ ಕೇರಳ ಕರಾವಳಿಯ ಆಚೆಗಿನ ಆಗ್ನೆಯ ಅರೇಬಿಯನ್ ಸಮುದ್ರದ ಮೇಲೆ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿದ್ದ ಮೇಲೆ ಸುಳಿಗಾಳಿ ಈಗ ದುರ್ಬಲಗೊಂಡಿದೆ ಎಂದೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Weather Alert: ಅಕ್ಟೋಬರ್ 13ರ ವರೆಗೆ ಮಳೆ
ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 13ರ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಮಳೆ ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಉತ್ತರ ಕರ್ನಾಟಕ / ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
Karnataka Weather Alert: ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.


Click it and Unblock the Notifications
