Rain Alert: ಕರ್ನಾಟಕದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ರಣಭೀಕರ ಮಳೆ! Imd Report

Rain Alert: ಚಂಡಮಾರುತ ಪ್ರಭಾವ ಹಾಗೂ ಹಿಂಗಾರು ಮಳೆಯ ಪ್ರಭಾವದಿಂದಾಗಿ ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಅಲ್ಲದೇ ಮುಂದಿನ ಒಂದು ವಾರದ ಅವಧಿಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದೇಶದಾದ್ಯಂತ ಮೊಂತಾ ಚಂಡಮಾರುತ ಪ್ರಸರಣ ಹಾಗೂ ವಾಯುಭಾರ ಕುಸಿತ ಕಾರಣಕ್ಕೆ ಭಾರೀ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಇನ್ನೂ ಒಂದು ವಾರದ ಅಧಿಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಕರ್ನಾಟದಲ್ಲಿ ಭಾನುವಾರ ಸೇರಿದಂತೆ ಮೂರು ದಿನಗಳ ಕಾಲ‌ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಯಾವೆಲ್ಲಾ ಭಾಗದಲ್ಲಿ ಹಾಗೂ ಇನ್ನೇಷ್ಟು ದಿನ ಮಳೆ ಆರ್ಭಟ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Karnataka Weather Alert IMD Issues Yellow Alert in 12 Districts for Heavy Rain

ಅರೇಬಿಯನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಈ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಇನ್ನು ಕರಾವಳಿಯ ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಈ ಬೆಂಗಳೂರು ಹೊರತುಪಡಿಸಿ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರದಲ್ಲೂ ಭಾರೀ ಮಳೆ ಇರಲಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಭಾಗದಲ್ಲಿ ಸಾಧಾರಣ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಅತಿಹೆಚ್ಚು ಗರಿಷ್ಠ ತಾಪಮಾನವು 31.4 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಮೈಸೂರಿನಲ್ಲಿ ದಾಖಲಾಗಿದೆ.

ಇನ್ನೊಂದು ವಾರ ಭಾರೀ ಮಳೆ: ಇನ್ನು ಕರ್ನಾಟಕದಾದ್ಯಂತ ಇನ್ನೊಂದು ವಾರದ ಅವಧಿಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಕ್ರಿಯವಾಗಿತ್ತು. ಅಲ್ಲದೇ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 12 ಸೆಂ.ಮೀ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+