Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ 6 ದಿನ ಭಾರೀ ಮಳೆ! ಐಎಂಡಿ ಮುನ್ಸೂಚನೆ...

Karnataka Rains: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಜ್ಯದಲ್ಲಿ ಆಗಸ್ಟ್‌ 13ರವರೆಗೆ ಮಳೆ ಇರಲಿದೆ. ಅಲ್ಲದೇ ಆಗಸ್ಟ್‌ 13ರ ನಂತರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲೂ ಮಳೆ ಆರ್ಭಟ ಮುಂದುವರಿದಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಾದ್ಯಂತ ಮಳೆ ಆರ್ಭಟ ಜೋರಾಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಇನ್ನಷ್ಟು ಜೋರಾಗಿ ಇರಲಿದೆ ಎಂದು ಹೇಳಲಾಗಿದ್ದು ಇಂದು ಸಹ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಸಹ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮುಂದಿನ 6 ದಿನಗಳ ಅವಧಿಗೆ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

Karnataka Weather Alert IMD Predicts 6 Days of Heavy Rain in These Districts

ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ: ಇನ್ನು ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಈಗ ಮಳೆಯ ಪ್ರಮಾಣ ತುಸು ಇಳಿಕೆಯಾಗಿದೆಯಾದರೂ ಇನ್ನೆರಡು ದಿನಗಳಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 13ರಿಂದ ಈ ಭಾಗದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ. ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ಕೊಡಲಾಗಿದೆ.

ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ: ಇನ್ನು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅಲ್ಲದೇ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲೂ ಮಳೆ ಮುಂದುವರಿದಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಚಂಡಮಾರುತ ಪರಿಚಲನೆ: ಚಂಡಮಾರುತ ಪರಿಚಲನೆ ಹೆಚ್ಚಾಗಿದೆ. ಆಂಧ್ರಪ್ರದೇಶದ ಉತ್ತರ ಕರಾವಳಿ ಹಾಗೂ ತೆಲಂಗಾಣದ ಸಮುದ್ರ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿ.ಮೀ ನಡುವೆ ದಕ್ಷಿಣಕ್ಕೆ ಎತ್ತರಕ್ಕೆ ಮೇಲ್ಮಟ್ಟದ ವಾಯುವ್ಯ ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಆಗಸ್ಟ್ 13ರ ಸುಮಾರಿಗೆ ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ನಾಳೆಯಿಂದ ರಾಜ್ಯದಾದ್ಯಂತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+