Karnataka Rains: ಬೆಂಗಳೂರು ಸೇರಿ ರಾಜ್ಯದ ಈ ಭಾಗದಲ್ಲಿ 3ದಿನ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!
Karnataka Rains: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಆರ್ಭಟ ಇರಲಿದ್ದು. ಮುಂದಿನ ಮೂರು ದಿನಗಳ ಅವಧಿಗೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತದ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆ ಆಗುತ್ತಿದೆ. ಇದೀಗ ವಾಯುಭಾರ ಕುಸಿತದ ಪ್ರಭಾವದಿಂದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಚಂಡಮಾರುತ ರೂಪುಗೊಂಡ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈಶಾನ್ಯ ಅರೇಬಿಯನ್ ಸಮುದ್ರದ ಮೇಲೆ ಬೀಸಿದ ತೀವ್ರ ಚಂಡಮಾರುತ ಪ್ರಭಾವವು ಕಳೆದ 6 ಗಂಟೆಗಳಲ್ಲಿ ಗಂಟೆಗೆ 18 ಕಿ.ಮೀ ವೇಗದಲ್ಲಿ ಪಶ್ಚಿಮಕ್ಕೆ ಚಲಿಸಿದೆ. ಇದು ಅಕ್ಟೋಬರ್ 5 ರ ವೇಳೆಗೆ ಪಶ್ಚಿಮ-ನೈಋತ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದ್ದು, ವಾಯುವ್ಯ ಮತ್ತು ಪಕ್ಕದ ಪಶ್ಚಿಮ ಮಧ್ಯ ಅರೇಬಿಯನ್ ಸಮುದ್ರವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಇನ್ನು ವಾರಾಂತ್ಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ದಕ್ಷಿಣ ಒಳನಾಡಿನಿಂದ ತಮಿಳುನಾಡಿನ ಕೊಮೊರಿನ್ ಪ್ರದೇಶದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದ ಪ್ರದೇಶದಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅಲ್ಲದೇ ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ತಮಿಳುನಾಡಿನ ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 3.1 ಕಿ.ಮೀ. ಎತ್ತರದಲ್ಲಿ ಮೇಲ್ಮುಖ ವಾಯು ಚಂಡಮಾರುತದ ಪ್ರಸರಣವಿದೆ ಐಎಂಡಿ ವರದಿ ಉಲ್ಲೇಖಿಸಿದೆ.
ಎಲ್ಲೆಲ್ಲಿ ಮಳೆ: ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ ಧಾರಾಕಾರ ಮಳೆ ಆಗಲಿದೆ.
ಅಲ್ಲದೇ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಬೆಂಗಳೂರು ಹವಾಮಾನ ವರದಿ: ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು. ಗಾಳಿಯ ವೇಗವು ಪ್ರತಿ ಕಿ.ಮೀಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಇನ್ನು ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications