Karnataka Rain Alert: ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಆಲಿಕಲ್ಲು ಸಹಿತ ಮಳೆ ಅಲರ್ಟ್
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿ.ಮೀ ತಲುಪುವ ಸಾಧ್ಯತೆಯಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.
ಮಧ್ಯ ಮಹಾರಾಷ್ಟ್ರದ ದಕ್ಷಿಣ ಭಾಗಗಳಿಂದ ಮನ್ನಾರ್ ಕೊಲ್ಲಿಯವರೆಗಿನ ಉತ್ತರ-ದಕ್ಷಿಣ ವಾಯುಭಾರ ಕುಸಿತವು ಈಗ ತೆಲಂಗಾಣದಿಂದ ರಾಯಲಸೀಮಾ ಮತ್ತು ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಈ ಹಿನ್ನೆಲೆ ಮೇ 3ರಿಂದ ಮೇ 5ರವರೆಗೆ ರಾಜ್ಯಾದ್ಯಂತ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ.

ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಬಹುದು ಎಂದು ಹೇಳಿದೆ.
ಭಾನುವಾರದಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ, ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆ, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಮತ್ತು ಆಲಿಕಲ್ಲು ಬೀಳುವ ಸಾಧ್ಯತೆ ಇದೆ. ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಬಹುದು.

ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹೇಳಿದೆ.
ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು 34-40 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳದಲ್ಲಿ 34-37 ಡಿಗ್ರಿ ಸೆಲ್ಸಿಯಸ್, ವಿಜಯಪುರ, ಗದಗ, ಬೀದರ್, ರಾಯಚೂರು ಮತ್ತು ಕಲಬುರ್ಗಿಯಲ್ಲಿ 40-42 ಡಿಗ್ರಿ ಸೆಲ್ಸಿಯಸ್, ಬೀದರ್ ಉತ್ತರ ಆಂತರಿಕ ಕರ್ನಾಟಕದಲ್ಲಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಆಗುಂಬೆಯಲ್ಲಿ 31-33 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ, ಚಿಕ್ಕಮಗಳೂರು, ಮಡಿಕೇರಿ, ಬೆಂಗಳೂರು ಹೆಚ್‌ಎಎಲ್ ಏರ್‌ಪೋರ್ಟ್, ಬೆಂಗಳೂರು ನಗರ, ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಚಿತ್ರದುರ್ಗ, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ ಮೈಸೂರು ಮತ್ತು ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗ ಸೇರಿದಂತೆ ಹಲವೆಡೆ ಹೆಚ್ಚಿನ ತಾಪಮಾನ ವರದಿಯಾಗಿದೆ.












Click it and Unblock the Notifications