Karnataka Rain Alert: ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಅಲರ್ಟ್‌

ರಾಜ್ಯದಲ್ಲಿ ಬೇಸಿಗೆಯಲ್ಲೂ ವರುಣನ ಆರ್ಭಣ ಮುಂದುವರಿದಿದೆ. ಯುಗಾದಿ ವೇಳೆಗೆ ತಂಪೆರದ ಮಳೆಯು ಮತ್ತೆ ಐದು ದಿನಗಳ ಕಾಲ ಅಬ್ಬರಿಸಲಿದೆ. ಏಪ್ರಿಲ್ 1 ಹಾಗೂ 2ರಂದು ಕರ್ನಾಟಕದ ವಿವಿಧೆಡೆ ಮೋಡ ಕವಿದ ವಾತಾವರಣದೊಂದಿಗೆ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀವರೆಗೆ ತಲುಪಬಹುದು. ಹಾಗಾಗಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಏಪ್ರಿಲ್ 2ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ. ಇನ್ನುಳಿದ ದಿನಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಏಪ್ರಿಲ್ 1 ಮತ್ತು 2ರಂದು ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 2ರಂದು ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳು, ಬೆಳಗಾವಿ, ಧಾರವಾಡ, ಗದಗ, ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Karnataka Weather Alert Thunderstorms Rain Strong Winds Expected On April 1

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 31ರಂದು ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದೆ. ಏಪ್ರಿಲ್ 1ರಂದು ಮಂಗಳವಾರ ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗಬಹುದು. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.

Karnataka Weather Alert Thunderstorms Rain Strong Winds Expected On April 1

ಏಪ್ರಿಲ್‌ 3ರಂದು ರಾಜ್ಯದ ಕರಾವಳಿ ಹಾಗೂ ಒಳನಾಡಿನ ಬೆಳಗಾವಿ, ಹಾಸನ, ಕೊಡಗು, ಮೈಸೂರು, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿ ಬೀಸುವ ಜೊತೆಗೆ ಆಲಿಕಲ್ಲು ಸಹಿತ ಮಳೆಯಾಗಲಿದೆ. ಏಪ್ರಿಲ್‌ 4 ಹಾಗೂ ಏಪ್ರಿಲ್‌ 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರವಾದ ಮಳೆಯಾಗಲಿದೆ.

Karnataka Weather Alert Thunderstorms Rain Strong Winds Expected On April 1

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಏಪ್ರಿಲ್‌ ಮೊದಲ ವಾರದಲ್ಲಿ ಸುಮಾರು 10 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸೂಚನೆ ಇರುವ ಕಾರಣ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾಸನ, ಕೊಡಗು, ಮೈಸೂರು, ಧಾರವಾಡ, ಗದಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇತ್ತ ವಿಜಯನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಮಂಡ್ಯ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+