Get Updates
Get notified of breaking news, exclusive insights, and must-see stories!

Karnataka Weather: ಶೀತಗಾಳಿ ನಡುವೆ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಜೊತೆಗೆ ಚಳಿ ವಾತಾವರಣ ಮುಂದುವರೆದಿದೆ. ಮುಂದಿನ ನಾಲ್ಕು ದಿನಗಳವರೆಗೆ ಹಲವೆಡೆ ಇದೇ ರೀತಿಯ ವಾತಾವರಣ ಇರಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಇಂದು (ಜನವರಿ 25) ಬೆಂಗಳೂರು ಸೇರಿದಂತೆ ಕೆಲವೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಅಂತಲೂ ತಿಳಿಸಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 25) ಮಂಜಿನ ಜೊತೆ ಚಳಿ ಮುಂದುವರೆದಿದೆ. ಈ ನಡುವೆ ನಗರದ ಅಲ್ಲಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ತಾಪಮಾನ ವಿಚಾರಕ್ಕೆ ಬಂದರೆ, ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Karnataka Weather Cold Dry Conditions Persist Light Rain Likely in Bengaluru and Nearby Districts

ಎಲ್ಲೆಲ್ಲಿ ಮಳೆ?: ಇಂದು ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಮೈಸೂರು, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆಯಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಭಾರೀ ಶೀತಗಾಳಿ?: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಮುಂದಿನ ನಾಲ್ಕು ದಿನ ಇದೇ ರೀತಿಯ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ರಾತ್ರಿ ವೇಳೆ ಭಾರೀ ಶೀತಗಾಳಿ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಕಲಬುರಗಿ, ಬೀದರ್, ರಾಯಚೂರು, ಬೆಳಗಾವಿ, ಯಾದಗಿರಿ ಭಾಗಗಳಲ್ಲಿ ಒಣಹವೆ ಜೊತೆ ಭಾರೀ ಶೀತಗಾಳಿ ಮುಂದವರೆದಿದೆ. ಮುಂದಿನ ಹಲವು ದಿನಗಲವರೆಗೂ ಈ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಣಹವೆ ವಾತಾವರಣ: ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆ ವಾತಾವರಣ ಇದ್ದು, ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಕೂಡ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಒಣಹವೆ ವಾತಾವರಣ ಇರಲಿದೆ. ಇಂದು ಈ ಭಾಗಗಳ ಕೆಲವೆಡೆ ಅಲ್ಲಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಪಮಾನದಲ್ಲಿ ಕುಸಿತ: ಕರ್ನಾಟಕದ ಉತ್ತರ ಒಳನಾಡಲ್ಲಿ ಕನಿಷ್ಠ ತಾಪಮಾನದಲ್ಲಿ ಮತ್ತಷ್ಟು ಕುಸಿತ ಆಗಲಿದೆ. ದಕ್ಷಿಣ ಒಳನಾಡಿನಲ್ಲಿ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳ ಆಗಲಿದೆ. ಮುಂದಿನ ಹಲವು ದಿನಗಳವರೆಗೂ ಇದೇ ರೀತಿಯ ವಾತಾವರಣ ಇರಲಿದೆ. ಬಳಿಕ ಫೆಬ್ರವರಿ ಆರಂಭವಾಗುತ್ತಿದ್ದಂತೆ ಚಳಿ ಪ್ರಮಾಣ ಕಡಿಮೆಯಾಗಲಿದ್ದು, ಬೇಸಿಗೆ ಆರಂಭವಾಗುವ ಮುನ್ಸೂಚನೆಯನ್ನು ನೀಡಿದೆ. ನಂತರ ವಾಡಿಕೆಯಂತೆ ಪಕ್ಕದ ರಾಜ್ಯದ ಕೇರಳದ ಬಳಿಕ ಜೂನ್‌ ಆರಂಭದಲ್ಲೇ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಡಲಿದ ಅಂತಲೂ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+