Karnataka weather: ಕರ್ನಾಟಕದ ಈ ಭಾಗಗಳಲ್ಲಿ ಚಳಿ, 3 ದಿನಗಳಲ್ಲಿ 8 ಜಿಲ್ಲೆಗಳಲ್ಲಿ ಮಳೆ: ಐಎಂಡಿ ರಿಪೋರ್ಟ್
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಆದರೆ ಮುಂದಿನ ಮೂರು ದಿನಗಳ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಸಂಕ್ರಾಂತಿ ಸಮಯದಲ್ಲಿ ಚಳಿ ಹೆಚ್ಚಾಗುವುದು ಇದೆ. ಶಿವರಾತ್ರಿಯ ವರೆಗೂ ಚಳಿ ಇರುವುದು ಅದಾದ ನಂತರ ಕ್ರಮೇಣ ಬೇಸಿಗೆ ಪ್ರಾರಂಭವಾಗುತ್ತದೆ. ಈ ವರ್ಷ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಜನವರಿ 5ರ ಹವಾಮಾನ ವರದಿ ಹಾಗೂ ಈ ವಾರ ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದಿತ್ತು.

ರಾಜ್ಯದಲ್ಲಿ 5 ದಿನ ಚಳಿ
ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನ ಮೈ ಕೊರೆಯುವ ಚಳಿ ಮುಂದುವರಿಯಲಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆ ಸಾಧ್ಯತೆ ಇಲ್ಲ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಧಾರಣವಾಗಿ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಗುರುವಾರದಿಂದ ರಾಜ್ಯದಲ್ಲಿ ಮಳೆ
ಇನ್ನು ಇದೇ ಗುರುವಾರ(ಜನವರಿ 8)ದಿಂದ ರಾಜ್ಯದಲ್ಲಿ ಮಳೆ ಆಗಲಿದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿ ಹಾಗೂ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಇದರಿಂದ ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ
ಜನವರಿ 8ರಿಂದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಜನವರಿ 9 ಮತ್ತು ಜನವರಿ 10ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಜನವರಿ 9: ಜನವರಿ 9ರ ಶುಕ್ರವಾರದಂದು ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆ ಇರಲಿದೆ. ಇನ್ನು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಉಳಿದಂತೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಜನವರಿ 10: ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ ಎಂದು ಐಎಂಡಿ ತಿಳಿಸಿದೆ.
ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್ ದಾವಣಗೆರೆಯಲ್ಲಿ ದಾಖಲಾಗಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications