Karnataka Weather: ಭೀಕರ ಚಳಿ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ವರ್ಷದಂದೇ ಮಳೆ ಸಾಧ್ಯತೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಮುಂದುವರೆದಿದೆ. ಅದರಲ್ಲೂ ಉತ್ತರ ಒಳನಾಡು ಭಾಗಗಳಲ್ಲಿ ತುಸು ಹೆಚ್ಚಾಗಿಯೇ ಇದೆ. ಹಾಗೆಯೇ ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಚಳಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು ಹವಾಮಾನ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 29) ಬೆಳಗ್ಗೆ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆದಿದೆ. ಇನ್ನು ಇಂದು ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ವರದಿ ಆಗಿದೆ.

ಮೂರು ದಿನ ಭೀಕರ ಚಳಿ: ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಬೆಳಗ್ಗೆ ಹಾಗೂ ಸಂಜೆ ವೇಳೆ ಭಾರೀ ಶಿತಗಾಳಿ ಬೀಸುತ್ತಿದೆ. ಹಾಗೆಯೇ ಮುಂದಿನ ಮೂರು ದಿನ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇದೇ ವಾತಾವರಣ ರೀತಿಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೊಸ ವರ್ಷಕ್ಕೆ ವರುಣನ ಎಂಟ್ರಿ ಸಾಧ್ಯತೆ: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಕಂಡಿದ್ದು, ಚಳಿ ಪ್ರಮಾಣ ಹೆಚ್ಚಾಗಿದೆ. ಇನ್ನೂ ಮುಂದಿನ ಮೂರು ದಿನ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ತೀವ್ರ ಚಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವೇ ದಿನಗಳಲ್ಲಿ ಹೊಸ ವರ್ಷ ಎಂಟ್ರಿ ಕೊಡಲಿದ್ದು, ಈ ವೇಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.
ಜಿಲ್ಲಾವಾರು ಹವಾಮಾನದ ವಿವರ: ಮುಂದಿನ ಮೂರು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಿರಲಿದೆ ಎಂದು ತಿಳಿಸಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಒಣ ಹವೆ ಇರಲಿದ್ದು, ಜೊತೆಗೆ ಶೀತಗಾಳಿ ಮುಂದುವರೆಯಲಿದೆ ಎಂದು ತಿಳಿಸಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ತೀವ್ರ ಚಳಿ ಇರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ರಾಜ್ಯದಲ್ಲಿ ಇದೀಗ ಬಹುತೇಕ ಭಾಗಗಳಲ್ಲಿ ತಾಪಮಾನದಲ್ಲಿ ತೀವ್ರ ಕುಸಿತ ಕಂಡಿದ್ದು, ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆಯೇ ಮುಂದಿನ ತಿಂಗಳಿನಿಂದ ಚಳಿ ಪ್ರಮಾಣ ತುಸು ಕಡಿಯಾಗಲಿದ್ದಯ, ಹೊಸ ವರ್ಷದ ದಿನದಂದು ಹಲವು ಭಾಗಗಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಫೆಬ್ರವರಿಯಲ್ಲಿ ಬರುವ ಶಿವರಾತ್ರಿ ವೇಳೆಗೆ ಚಳಿ ಸಂಪೂರ್ಣ ಮಾಯವಾಗಲಿದ್ದು, ಅಲ್ಲಿಂದ ಬೇಸಿಗೆ ಆರಂಭವಾಗಲಿದೆ. ಈ ವರ್ಷ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆರೆ, ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಕೂಡ ತುಂಬಿ ಹರಿದಿವೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇದೀಗ ಸದ್ಯ ಶೀತಗಾಳಿ ಮುಂದುವರೆದಿದೆ.












Click it and Unblock the Notifications