ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಟ್ಟ ಮಂಜು, ಭಾರೀ ಶೀತಗಾಳಿ ಮುಂದುವರೆಯುವ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಶೀತಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 22) ಬೆಳ್ಳಂಬೆಳಗ್ಗೆ ದಟ್ಟ ಮಂಜಿನ ಜೊತೆ ಭಾರೀ ಶೀತಗಾಳಿ ವಾತಾವರಣ ಮುಂದುವರೆದಿದೆ. ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ. ಇನ್ನೂ ನಗರದಲ್ಲಿಂದು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಪಮಾನದ ವಿವರ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಚಳಿ ಜೊತೆಗೆ ಒಣಹವೆ ವಾತಾವರಣ ಕಂಡುಬರಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ವೇಳೆ ಸಾಧಾರಣ ಮಂಜು ಇರಲಿದೆ. ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 15°C ಇರಲಿದೆ. ಗಾಳಿಯ ಗುಣಮಟ್ಟ ಸಾಧಾರಣ ಮಟ್ಟದಲ್ಲಿ ಇದೆ. ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಚಳಿಗಾಳಿ ಮುಂದುವರೆದಿದ್ದು, ಕನಿಷ್ಠ ತಾಪಮಾನ 12°Cನಿಂದ 14°C ವರೆಗೆ ಕುಸಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮಂಗಳೂರು, ಉಡುಪಿ ಭಾಗದಲ್ಲಿ ಗರಿಷ್ಠ ತಾಪಮಾನ 32°C ದಾಟುವ ಸಾಧ್ಯತೆಯಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಬೆಳಗ್ಗೆ ವೇಳೆ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು, ವಾಹನ ಸವಾರರಿಗೆ ಅಡಚಣೆ ಉಂಟಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಬೆಳಗ್ಗೆ ಹಾಗೂ ರಾತ್ರಿ ವೇಳೆ ಚಳಿ ಪ್ರಮಾಣ ಹೆಚ್ಚಿರಲಿದ್ದು, ಜೊತೆಗೆ ಮಂಜು ಕೂಡ ಆವರಿಸಲಿದೆ ಎಂದು ತಿಳಿಸಿದೆ.
ಶೀತಗಾಳಿ ಪ್ರಮಾಣ ಹೆಚ್ಚಳ: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಮುಂದಿನ ಹಲವು ದಿನಗಳವರೆಗೂ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಜೊತೆಗೆ ಭಾರೀ ಶೀತವಾಗಳು ಮುಂದುವರೆದಿದ್ದ, ಮುಂದಿನ ಹಲವು ದಿನಗಳವರೆಗೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರದಲ್ಲೂ ಒಣಹವೆ ವಾತಾವರಣದ ಜೊತೆಗೆ ಚಳಿಗಾಳಿ ಬೀಸಲಿದೆ ಎಂದು ತಿಳಿಸಿದೆ. ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ಇದೇ ರೀತಿಯ ವಾತಾವರಣ ಇರಲಿದ ಎಂದು ಮುನ್ಸೂಚನೆ ನೀಡಿದೆ.
ಪ್ರಮುಖ ಸಲಹೆ: ಇದೀಗ ಸದ್ಯ ಭಾರೀ ಶೀತಗಾಳಿ ಮುಂದುವರೆದ ಹಿನ್ನೆಲೆ ಜನರು ಮನೆಯಿಂದ ಹೊರಗಡೆ ಹೋಗುವುದಕ್ಕೂ ಮುನ್ನ ಹತ್ತಿ ಬಟ್ಟೆಯಿಂದ ತಯಾರಿಸಲಾದ, ಮೈ ಬೆಚ್ಚಗಿಡುವ ಉಡುಪುಗಳನ್ನು ಧರಿಸುವುದು ಉತ್ತಮ. ಬೆಳಗ್ಗೆ ಹಾಗೂ ರಾತ್ರಿ ವೇಳೆ ಚಳಿಗಾಳಿ ಪ್ರಮಾಣ ಹೆಚ್ಚಿರಲಿದ್ದು, ಈ ಸಮಯದಲ್ಲಿ ಚಿಕ್ಕ ಮಕ್ಕಳನ್ನು ಮನೆಯಿಂದ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಸಲಹೆಯನ್ನೂ ನೀಡಲಾಗಿದೆ.












Click it and Unblock the Notifications