Karnataka Weather: ಕರ್ನಾಟಕದಲ್ಲಿ ಚಳಿ ಪ್ರಮಾಣ ಇಳಿಕೆ, ಜನವರಿ 29ರ ಹವಾಮಾನ ವರದಿ ಇಲ್ಲಿದೆ
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ಅವಧಿಗೆ ಕರ್ನಾಟಕದಲ್ಲಿ ಸಾಮಾನ್ಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದುರ್ಬಲವಾದ ವಾಯುಭಾರ ಕುಸಿತವು ಆಗ್ನೇಯ ಉತ್ತರ ಪ್ರದೇಶದಿಂದ ಕರ್ನಾಟಕದ ಉತ್ತರ ಒಳನಾಡಿನವರೆಗೆ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರಕ್ಕೆ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಅವಧಿಯಲ್ಲಿ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇರುವುದಿಲ್ಲ. ಇನ್ನು ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲೂ ದೊಡ್ಡ ಬದಲಾವಣೆ ಆಗಿಲ್ಲ ಎಂದು ಐಎಂಡಿ ಹೇಳಿದೆ.ಕರ್ನಾಟಕದ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1.6C ಎಂದ 30 ಕಡಿಮೆಯಾಗಿದೆ.

ಕರಾವಳಿ ಕರ್ನಾಟಕದ ಅನೇಕ ಸ್ಥಳಗಳಲ್ಲಿ, ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ (1.6C ಯಿಂದ 8,0) ಹೆಚ್ಚು, ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ (3.1°C ಎಂದ 5.0) ಹೆಚ್ಚು ಇರಲಿದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣ ಮುಂದುವರಿದಿದೆ.
ಇನ್ನು ಬೀದರ್, ವಿಜಯಪುರ, ಧಾರವಾಡ, ಬೆಳಗಾವಿ ವಿಮಾನ ನಿಲ್ದಾಣ, ಗದಗ, ಹಾವೇರಿ, ರಾಯಚೂರು ಮತ್ತು ದಾವಣಗೆರೆ, ಬೆಂಗಳೂರು ನಗರ, ಮಂಡ್ಯ, ಶಿವಮೊಗ್ಗ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 14.0-180 ಡಿಗ್ರಿ ವ್ಯಾಪ್ತಿಯಲ್ಲಿದೆ. ಹಾಸನದಲ್ಲಿ 12.9C ಮತ್ತು ಚಿಂತಾಮಣಿಯಲ್ಲಿ 12.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಒಳನಾಡಿನ ಕೊಪ್ಪಳ, ಕಲಬುರಗಿ ಮತ್ತು ಚಿತ್ರದುರ್ಗ ಭಾಗದಲ್ಲಿ 18.1-20C ಇದೆ. ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ ಮತ್ತು ಶಕ್ತಿನಗರ ಪ್ರದೇಶದಲ್ಲಿ 20.1-23.9C ಮುಂದುವರಿದಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಮುಂದಿನ 24 ಗಂಟೆ ಅವಧಿಯಲ್ಲಿ: ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆ ಅವಧಿಯಲ್ಲಿ: ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications