Karnataka Weather: ಬೆಂಗಳೂರು ಸೇರಿ ರಾಜ್ಯಹ ಹಲವು ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ಮುನ್ಸೂಚನೆ: ಕೆಲವೆಡೆ ಮಳೆ ಸಾಧ್ಯತೆ

Karnataka Weather: ಇದೀಗ ರಾಜ್ಯದ ಬಹುತೇಜಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಹಲವೆಡೆ ಭಾರೀ ಶೀತಗಾಳಿ ಮುಂದುವರೆಯಲಿದೆ. ಈ ನಡುವೆಯೇ ಮುಂಬರುವ ಜನವರಿ ಆರಂಭದಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 30) ಬೆಳಗ್ಗೆ ಮೋಡ ಕವಿದ ವಾತಾವರಣದ ಜೊತೆಗೆ ಶೀತಗಾಳಿ ಮುಂದುವರೆದಿದೆ. ಸಂಜೆ ಕೂಡ ಇದೇ ರೀತಿಯ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಜಿನುಗು ಮಳೆ ಆಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ ಎಂದು ತಿಳಿಸಿದೆ.

Karnataka Weather Cold Wave Intensifies Across State Light Rain Likely in Early January

ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಶೀತಗಾಳಿ ಬೀಸಲಿದ್ದು,, ಕೆಲವೆಡೆ ಮಾತ್ರ ದಟ್ಟ ಮಂಜಿನ ಜೊತೆ ಭೀಕರ ಚಳಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲೇ ಚಳಿ ಪ್ರಯಾಣ ತುಸು ಹೆಚ್ಚಾಗಿರಲಿದೆ ಎಂದು ತಿಳಿಸಿದೆ.

ಭೀಕರ ಚಳಿ: ಇನ್ನೂ ಕೇವಲ ಒಂದು ದಿನ ಕಳೆದರೆ 2025 ಮುಗಿಯಲಿದ್ದು, 2026ನೇ ವರ್ಷ ಎಂಟ್ರಿ ಕೊಡಲಿದೆ. ಮುಂಬರುವ ವರ್ಷದ ಆರಂಭದಲ್ಲೇ ಬೆಂಗಳೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎನ್ನುವ ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಗನನಾರ್ಹವಾಗಿ ಇಳಿಕೆ ಆಗಲಿದ್ದು, ಶೀತಗಾಳಿ ಇರಲಿದೆ ಎಂದು ತಿಳಿಸಿದೆ. ಅದರಲ್ಲೂ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಭೀಕರ ಚಳಿ ಮುಂದುವರೆಯಲಿದೆ ಎಂದು ತಿಳಿಸಿದೆ.

ಬೀದರ್, ಧಾರವಾಡ ಹಾಗೂ ಹಾವೇರಿ ಸೇರಿದಂತೆ ಉತ್ತರ ಒಳನಾಡಿದ ಹಲವಾರು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ ಮುಂದುವರೆಲಿದೆ. ಮುಂಬರುವ ದಿನಗಳಲ್ಲಿ ಈ ಭಾಗಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗಲಿದ್ದು, ಭಾರೀ ಚಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಉಳಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲೂ ಕೂಡ ಚಳಿ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಚಳಿ?: ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಿರಲಿದೆ ಎಂದು ತಿಳಿಸಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಒಣ ಹವೆ ಇರಲಿದ್ದು, ಜೊತೆಗೆ ಶೀತಗಾಳಿ ಮುಂದುವರೆಯಲಿದೆ ಎಂದು ತಿಳಿಸಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ತೀವ್ರ ಚಳಿ ಇರಲಿದೆ. ಬಳಿಕ ಜನವರಿಯಲ್ಲಿ ಮೊದಲ ವಾರದಲ್ಲೇ ಶೀತಗಾಳಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈ ನಡುವೆಯೇ ಮುಂದಿನ ದಿನಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚೆಯೂ ಇದ್ದು, ಜನವರಿ ಕೊನೆಯಲ್ಲಿ ಚಳಿ ಪ್ರಮಾಣ ತಗ್ಗುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+