Karnataka Weather: ರಾಜ್ಯದಾದ್ಯಂತ ಚಳಿ ಹೆಚ್ಚಳ, ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಳಿ ಹೆಚ್ಚಳವಾಗಿದ್ದು, ವಿವಿಧ ಭಾಗದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನ ಹಲವೆಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಾದ್ಯಂತ ಈಶಾನ್ಯ ಮಾನ್ಸೂನ್ ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದಾದ್ಯಂತ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನವು ಧಾರವಾಡದಲ್ಲಿ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ರಿಪೋರ್ಟ್ ತಿಳಿಸಿದೆ.

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದ್ದು, ಚಳಿ ಹೆಚ್ಚಳವಾಗಿದೆ. ಅಲ್ಲದೇ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು ಹಾಗೂ ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
5 ದಿನಗಳ ವರೆಗೆ ಚಳಿ ಹೆಚ್ಚಳ
ಇನ್ನು ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಚಳಿ ಮುಂದುವರಿಯಲಿದೆ. ಮುಂದಿನ ಐದು ದಿನಗಳ ವರೆಗೆ ಭಾರೀ ಚಳಿ ಇರಲಿದೆ ಎಂದು ವೆದರ್ ರಿಪೋರ್ಟ್ ತಿಳಿಸಿದೆ. ಕನಿಷ್ಠ ತಾಪಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ. ಆದರೆ, ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.
ಬೆಂಗಳೂರು ವೆದರ್ ರಿಪೋರ್ಟ್
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು ಹಾಗೂ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಇನ್ನು ಮುಂದಿನ 48 ಗಂಟೆ ಅವಧಿಯಲ್ಲೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ರಾಜ್ಯದಲ್ಲಿ ಹವಾಮಾನ ಹೇಗಿದೆ ?
ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಭಾಗದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಇನ್ನು ಆಗ್ನೇಯ ಬಂಗಾಳಕೊಲ್ಲಿ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸುವ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.












Click it and Unblock the Notifications