Karnataka Weather: ವಾಯು ಚಂಡಮಾರುತ ಪರಿಚಲನೆ ಕಡಿಮೆ: 5 ದಿನ ಹವಾಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ: ಐಎಂಡಿ
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಫೆಬ್ರವರಿ 5ರಂದು ಕನಿಷ್ಠ ತಾಪಮಾನದಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದ್ದು, ಚಳಿ ಹೆಚ್ಚಳವಾಗಿದೆ. ಇನ್ನು ಮುಂದಿನ ಐದು ದಿನಗಳ ವರೆಗೆ ಕನಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದಕ್ಷಿಣ ಕೇರಳ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನ ಇದೆ. ಕೇರಳ -ಕರ್ನಾಟಕ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 9 ಕಿ.ಮೀ ಎತ್ತರದಲ್ಲಿ ಟ್ರಫ್ ಸೃಷ್ಟಿಯಾಗಿದೆ. ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯಾದ ಮೇಲೆ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Weather ಕರ್ನಾಟಕದಲ್ಲಿ ಹವಾಮಾನ ಹೇಗಿದೆ ?
ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಚಳಿ ಪ್ರಮಾಣ ಇಳಿಕೆಯಾಗುತ್ತಿದ್ದರೂ ಮುಂಜಾನೆ ಹಾಗೂ ಸಂಜೆ ಸಮಯದಲ್ಲಿ ಚಳಿ ಹೆಚ್ಚಾಗಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಬೆಳಿಗ್ಗೆ ಸಮಯದಲ್ಲಿ ದಟ್ಟ ಮಂಜು ಕವಿದ ವಾತಾವರಣ ಮುಂದುವರಿದಿದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶ ವಿಜಯಪುರದಲ್ಲಿ ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?
ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಇತ್ತು. ಆದರೆ ಉತ್ತರ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಈ ಭಾಗಗಳಲ್ಲಿ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ 3 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮತ್ತು ಉಳಿದ ಸ್ಥಳಗಳಲ್ಲಿ ಸಾಮಾನ್ಯ ತಾಪಮಾನ ದಾಖಲಾಗಿದೆ.
ಉತ್ತರ ಆಂತರಿಕ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಬೀದರ್, ಹಾಸನ, ಬೆಂಗಳೂರು ಕೆಐಎಎಲ್ ಎಪಿ, ಬೆಂಗಳೂರು ಎಚ್‌ಎಎಲ್ ಎಪಿ, ಮಂಡ್ಯ, ಬೆಂಗಳೂರು ನಗರ, ಚಿತ್ರದುರ್ಗ ಮತ್ತು ದಕ್ಷಿಣ ಒಳನಾಡಿನ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ. ಉತ್ತರ ಒಳ ಕರ್ನಾಟಕದ ಗದಗ, ಬೆಳಗಾವಿ ವಿಮಾನ ನಿಲ್ದಾಣ, ಹಾವೇರಿ, ಕೊಪ್ಪಳ, ಕಲಬುರಗಿ ಹಾಗೂ ರಾಯಚೂರು ಮತ್ತು ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗ ಮತ್ತು ಮೈಸೂರು ಭಾಗದಲ್ಲಿ 16.2 ಡಿಗ್ರಿ ಸೆಲ್ಸಿಯಸ್‌ನಿಂದ 19.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಕರ್ನಾಟಕದ ಕಾರವಾರ, ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ ಮತ್ತು ಶಕ್ತಿನಗರ ಭಾಗದಲ್ಲಿ ತಾಪಮಾನವು 20.08 ಡಿಗ್ರಿ ಸೆಲ್ಸಿಯಸ್‌ನಿಂದ 23.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
-
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications