Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಲಿಕಲ್ಲು ಸಮೇತ ಜೋರು ಮಳೆ, ಕುಣಿದು ಕುಪ್ಪಳಿಸಿದ ರೈತ
ತುಮಕೂರು, ಮೇ 08: : ಕರ್ನಾಟಕದ ಜನತೆ ಬಿರು ಬಿಸಿಲಿನಿಂದ ತತ್ತರಿಸಿ ಹೋಗಿದ್ದು, ಕೊನೆಗೂ ವರುಣ ಕೃಪೆ ತೋರಿದ್ದಾನೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆರಾಯನ ಆಗಮನವಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.
ಹೌದು, ಕಳೆದ ವರ್ಷ ಮಳೆಯ ಅಭಾವದಿಂದಾಗಿ ಕೆರೆಕುಂಟೆಗಳು, ಹಳ್ಳಕೊಳಗಳು ಬತ್ತಿ ಹೋಗಿವೆ. ನದಿಗಳೇ ಬತ್ತಿ ಹೋಗಿದ್ವು. ಇದೀಗ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ರೈತರಲ್ಲಿ ಹರ್ಷವನ್ನುಂಟು ಮಾಡಿದೆ. ಸೋಮವಾರ ಸಂಜೆ ಬೆಂಗಳೂರು ನಗರ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಂಗಳವಾರ ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗಿದೆ.

ಇನ್ನೂ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಮತ್ತು ಬೇರೆ ಕೆಲವು ಗ್ರಾಮಗಳಲ್ಲಿ ಆಲಿಕಲ್ಲು ಸಮೇತ ಜೋರು ಮಳೆಯಾಗಿದೆ. ಧಾರಾಕಾರವನ್ನ ಸುರಿದ ಮಳೆಯಿಂದಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ರೈತರು ಖುಷಿಯಿಂದ ಕುಣಿದು ಕುಪ್ಪಳಿಸಿದ್ದಾರೆ.
ರಾಜ್ಯದ 16 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಮಳೆಯಾಗುತ್ತಿದೆ. ಕಳೆದ ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು (ಬುಧವಾರ) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications