Karnataka Weather: ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರವಾಳಿ ಜಿಲ್ಲೆಗಳ ಹಲವೆಡೆ ಭಾರೀ ಶೀತಗಾಳಿ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಶೀತಗಾಳಿ ಜೊತೆಗೆ ಒಣಹವೆ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಚಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಬೆಂಗಳೂರಿನಲ್ಲಿ ಇಂದು (ಜನವರಿ 23) ಬೆಳ್ಳಂಬೆಳಗ್ಗೆ ದಟ್ಟ ಮಂಜಿನ ಜೊತೆ ಭಾರೀ ಚಳಿಗಾಳಿ ಮುಂದುವರೆದಿದ್ದು, ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ನಗರದಲ್ಲಿಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇಂದು ಬೆಳಗ್ಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಚಳಿ ಜೊತೆಗೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಅಂತಲೂ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಶೀತಗಾಳಿ ಜೊತೆಗೆ ಒಣಹವೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಶೀತಗಾಳಿ ಜೊತೆಗೆ ಒಣಹವೆ ವಾತಾವರಣ ಇರಲಿದೆ. ಹಾಗೆಯೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲೂ ಕೂಡ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಚಳಿಗಾಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ರಾತ್ರಿ ವೇಳೆ ಅತೀ ಹೆಚ್ಚು ಶೀತಗಾಳಿ ವಾತಾವರಣ ನಿರ್ಮಾಣ ಆಗುತ್ತಿದೆ. ಮಧ್ಯಾಹ್ನದ ವೇಳೆಗೆ ಬಿರುಬಿಸಿಲಿನ ವಾತಾವರಣ ಮುಂದುವರೆಯುತ್ತಿದೆ.
ಇದೀಗ ಸದ್ಯ ಭಾರೀ ಶೀತಗಾಳಿ ಮುಂದುವರೆದ ಹಿನ್ನೆಲೆ ಜನರು ಮನೆಯಿಂದ ಹೊರಗಡೆ ಹೋಗುವುದಕ್ಕೂ ಮುನ್ನ ಹತ್ತಿ ಬಟ್ಟೆಯಿಂದ ತಯಾರಿಸಲಾದ, ಮೈ ಬೆಚ್ಚಗಿಡುವ ಉಡುಪುಗಳನ್ನು ಧರಿಸುವುದು ಉತ್ತಮ. ಬೆಳಗ್ಗೆ ಹಾಗೂ ರಾತ್ರಿ ವೇಳೆ ಚಳಿಗಾಳಿ ಪ್ರಮಾಣ ಹೆಚ್ಚಿರಲಿದ್ದು, ಈ ಸಮಯದಲ್ಲಿ ಚಿಕ್ಕ ಮಕ್ಕಳನ್ನು ಮನೆಯಿಂದ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಸಲಹೆಯನ್ನೂ ನೀಡಲಾಗಿದೆ.
ಇನ್ನೂ ಕೆಲವೇ ದಿನಗಳಲ್ಲಿ ಚಳಿಗಾಳ ಮಾಯವಾಗಲಿದ್ದು, ಬೇಸಿಗೆ ಎಂಟ್ರಿ ಕೊಡಲಿದೆ. ಆಗ ಚಳಿಯಿಂದ ಜನರಿಗೆ ಮುಕ್ತಿ ಸಿಕ್ಕಂತಾಗಲಿದೆ. ಬಳಿಕ ಜೂನ್ ಆರಂಭ ಆಗುತ್ತಿದ್ದಂತೆ ವಾಡಿಕೆಯಂತೆ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಡುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಬಾರಿ ಮುಂಗಾರು ವೇಳೆ ಉತ್ತಮ ಮಳೆಯಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದಿವೆ.












Click it and Unblock the Notifications