Karnataka Weather: ಅರ್ನಾಬ್ ಚಂಡಮಾರುತದ ಪ್ರಭಾವ; ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ, ಬೆಂಗಳೂರಿನಲ್ಲೂ ಮಳೆ!

ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಆಗ್ನೇಯ ಉತ್ತರ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದ್ದ ಕಡಿಮೆ ಒತ್ತಡದ ಪ್ರದೇಶವು (ಅತ್ಯಂತ ತೀವ್ರ ಚಂಡಮಾರುತ 'ಅರ್ನಾಬ್)ಅಕ್ಟೋಬರ್ 31ರಂ ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಈ ವ್ಯವಸ್ಥೆಯು 'ಏಕ್ಸಾ ಟ್ರಾಪಿಕಲ್ ವೆಸ್ಟರ್ಲೀನ್ ಪ್ರಭಾವಕ್ಕೆ ಒಳಪಟ್ಟಿದ್ದು, ಇದರೊಂದಿಗೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು ಈಗ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಆರ್ಭಟ ಮುಂದುವರಿಯಲಿದೆ.

ಆಗ್ನೇಯ ಬಂಗಾಳ ಕೊಲ್ಲಿ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಂಡಮಾನ್ ಸಮುದ್ರದ ಪಕ್ಕದ ಪ್ರದೇಶಗಳಲ್ಲಿ ಇದ್ದ 'ಸ್ಪಷ್ಟವಾಗಿ ಗುರುತಿಸಬಹುದಾದ ಕಡಿಮೆ ಒತ್ತಡದ ಪ್ರದೇಶ'ವು ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಇದರೊಂದಿಗೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದೆ. ಇದು ಪಶ್ಚಿಮ ವಾಯುವ್ಯ ದಿಕ್ಕಿನತ್ತ ಚಲಿಸಿ, ಮುಂದಿನ 05 ಗಂಟೆಗಳಲ್ಲಿ ಅದೇ ಪ್ರದೇಶದಲ್ಲಿ ಡಿಪ್ರಷನ್' (ಅಲ್ಪ ಒತ್ತಡದ ವ್ಯವಸ್ಥೆ) ಆಗಿ ಬಲಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Karnataka Weather Forecast Cyclone Arnab to Bring Heavy Rain for 3 Days Bengaluru Also Likely to See Showers

ಅರ್ನಾಬ್ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ ಕರಾವಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ನವೆಂಬರ್ 1ರಿಂದ 5 ರ ವರೆಗೆ ವಿವಿಧ ಪ್ರದೇಶಗಳಲ್ಲಿ ಮಳೆ ಇರಲಿದೆ.

Karnataka Weather: ಈ ಜಿಲ್ಲೆಗಳಲ್ಲಿ ಮಳೆ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮುಂದಿನ ಮೂರು ದಿನಗಳಲ್ಲಿ ಈ ಭಾಗದಲ್ಲಿ ಮಿಂಚು ಗುಡುಗು ಸಹಿತ ಮಳೆ ಆಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಇರಲಿದೆ. ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿಯೊಂದಿಗೆ ಮಳೆ ಆಗಲಿದೆ.

ಅಲ್ಲದೆ ಬಳ್ಳಾರಿ, ವಿಜಯನಗರದಲ್ಲೂ ಮಳೆ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹೇಗೆ ಇರಲಿದೆ ಹವಾಮಾನ

ಇನ್ನು ಬೆಂಗಳೂರಿನಲ್ಲೂ ಮಳೆ ಇರಲಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಮಳೆ ಆಗಲಿದೆ. ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+