Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಒಂದು ವಾರ ಮಳೆ ಮುನ್ಸೂಚನೆ: ಐಎಂಡಿ

Karnataka Rains: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ತಗ್ಗಿದ್ದು, ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಆಗಸ್ಟ್‌ 18) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಅಲ್ಲಲ್ಲಿ ಜಿನುಗು ಮಳೆಯಾಗುವ ಸಾಧ್ಯತೆಯಿದೆ. ಇನ್ನು ನಗರದಲ್ಲಿಂದು ರಾಜಧಾನಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Forecast IMD Predicts Light Rain in Bengaluru and Several Districts for 7 Days

ಮುಂದಿನ ಒಂದು ವಾರ ಮಳೆ ಮುನ್ಸೂಚನೆ

ಮುಂದಿನ 7 ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದ್ದು, ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ವಾತಾವರಣ ಹೇಗಿರಲಿದೆ?

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಬಿಸಿಲು ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೀಗ ಮುಂಗಾರು ತಗ್ಗಿದ್ದರೂ ಸಹ ಕೆಲವೆಡೆ ಮಾತ್ರ ವರುಣನ ಆರ್ಭಟ ಮುಂದುವರೆದಿರುವ ಬಗ್ಗೆ ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+