Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಹೆಚ್ಚುತ್ತಿದ್ದು, ಜನ ಸೆಕೆ ತಾಳಲಾರದೆ ಹೈರಾಣಾಗಿದ್ದಾರೆ. ಆದರೆ ಭಾರತ ಹವಾಮಾನ ಇಲಾಖೆ (IMD)ಇಂದು ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಾದ್ಯಂತ ಇಂದು (ಮಾರ್ಚ್ 24, 2026) ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳಾಗುವ ನಿರೀಕ್ಷೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೇಸಿಗೆಯ ಬಿಸಿಯಿಂದ ಕಂಗೆಟ್ಟಿದ್ದ ಜನತೆಗೆ ಈ ಮಳೆಯ ಮುನ್ಸೂಚನೆ ಕೊಂಚ ನಿರಾಳತೆ ನೀಡುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ಹವಾಮಾನ ಹೀಗಿದೆ

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಭಾಗದಲ್ಲಿ ಸಮುದ್ರಕ್ಕೆ ಇಳಿಯುವ ಮೀನುಗಾರರಿಗೆ ಸದ್ಯಕ್ಕೆ ಯಾವುದೇ ವಿಶೇಷ ಎಚ್ಚರಿಕೆಯನ್ನು ನೀಡಲಾಗಿಲ್ಲ.

Karnataka Weather

ಉತ್ತರ ಒಳನಾಡು: ಗುಡುಗು ಹಾಗೂ ಬಿರುಗಾಳಿಯ ಎಚ್ಚರಿಕೆ

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬರಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಕೇವಲ ಮಳೆಯಷ್ಟೇ ಅಲ್ಲದೆ, 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ನಿನ್ನೆ (ಮಾರ್ಚ್ 23) ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ಉಷ್ಣಾಂಶ ಅಂದರೆ 37.3°C ದಾಖಲಾಗಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.

ದಕ್ಷಿಣ ಒಳನಾಡಿನಲ್ಲಿ ಹೇಗಿರಲಿದೆ ಹವಮಾನ?

ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲೂ ಇಂದು ಮಳೆಯ ಸಿಂಚನವಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರೆಯಲಿದೆ. ನಿನ್ನೆ ಮೈಸೂರಿನಲ್ಲಿ 18.2°C ನಷ್ಟು ರಾಜ್ಯದ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು.

ಬೆಂಗಳೂರು ಹವಾಮಾನ ವರದಿ

ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶವು 33°C ಹಾಗೂ ಕನಿಷ್ಠ ಉಷ್ಣಾಂಶವು 22°C ನಷ್ಟು ದಾಖಲಾಗುವ ಸಾಧ್ಯತೆಯಿದೆ.

ಒಟ್ಟಾರೆಯಾಗಿ, ರಾಜ್ಯದಲ್ಲಿ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಬದಲಾವಣೆ ಇಲ್ಲದಿದ್ದರೂ, ಮುಂದಿನ 5 ದಿನಗಳ ಕಾಲ ತಾಪಮಾನ ಸ್ಥಿರವಾಗಿರಲಿದೆ. ಆದರೆ ಮಳೆ ಹಾಗೂ ಬಿರುಗಾಳಿಯ ಎಚ್ಚರಿಕೆ ಇರುವುದರಿಂದ ಪ್ರಯಾಣಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಸೂಕ್ತ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+