ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಯೆಲ್ಲೊ ಅಲರ್ಟ್: ಧಾರಾಕಾರ ಮಳೆಯಾಗುವ ಸಾಧ್ಯತೆ
ಬೆಂಗಳೂರು, ಸೆಪ್ಟೆಂಬರ್ 29: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು (ಸೆ.29) ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಹೇಳಿದ್ದಾರೆ.
ರಾಜ್ಯದ ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿಯು ಮಂಗಳವಾರ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಮುಂಗಾರು ಕ್ಷೀಣಿಸಿದ್ದರಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಮಳೆ ಪ್ರಮಾಣ ತಗ್ಗಿದೆ. ಮುಂದಿನ 48 ಗಂಟೆಗಳಲ್ಲಿ ಕೆಲವೆಡೆ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.
ಇನ್ನು ದಕ್ಷಿಣ ಒಳನಾಡಿನಲ್ಲಿ ಅ. 1 ಮತ್ತು 2ರಂದು ಸಾಧಾರಣ ಮಳೆಯಾಗಬಹುದು ಎನ್ನಲಾಗಿದೆ.
Recommended Video
High Command ಹತ್ರ ಮಾತು ಕಥೆ in Process | Oneindia Kannada












Click it and Unblock the Notifications