Karnataka Weather: ಮಳೆಯ ಮುನ್ಸೂಚನೆ ನಡುವೆಯೂ ಈ ಜಿಲ್ಲೆಗಳಲ್ಲಿ ಬಿಸಿಲ ಹೊಡೆತ: ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು, ಏಪ್ರಿಲ್‌ 08: ರಾಜ್ಯದ ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕೆಲವೆಡೆ ಮಳೆಯ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆಯೊಂದಿಗೆ, ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ರಾಜ್ಯದಲ್ಲಿ ರಾಜ್ಯದಲ್ಲಿ ಮುಂದಿನ ಒಂದು ವಾರ (ಏಪ್ರಿಲ್‌ 8 ರಿಂದ ಏಪ್ರಿಲ್‌ 14) ಉಷ್ಣ ಅಲೆಯ ಜತೆ ಸಾಧಾರಣ ಮಳೆ ಕೂಡ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬಳ್ಳಾರಿ, ರಾಯಚೂರು, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣ ಹವೆ ಇರಲಿದೆ.

karnataka weather heat wave conditions in these districts despite rain warning

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ಏಪ್ರಿಲ್‌ 08 ರಂದು ಬೆಳಗಾವಿ, ಬೀದರ್‌, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರಲಿದೆ.

ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರಿನ ಬಿಸಿ ಹೆಚ್ಚಾಗಲಿದೆ. ಗರಿಷ್ಠ ತಾಪಮಾನವು ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಎಲ್ಲ ಕಡೆಗಳಲ್ಲಿ ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ಸಮಯ ಬೆಚ್ಚನೆಯ ವಾತಾವರಣವು ಇರಲಿದೆ.

ಇನ್ನೂ ಏಪ್ರಿಲ್‌ 9 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳ ಹಾಗೂ ಏಪ್ರಿಲ್‌ 10 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್‌ 12 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಇದ್ದು, ಏಪ್ರಿಲ್‌ 11 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+