Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಭೀಕರ ಚಳಿ ಮುನ್ಸೂಚನೆ
Karnataka Rains: ಈಗಾಗಲೇ ರಾಜ್ಯದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳ ಮುಂದುವರೆದಿದೆ. ಹಾಗೆಯೇ ಇಂದಿನಿಂದ ಅಂದರೆ ಜನವರಿ 22ರಿಂದ 27ರ ವರೆಗೆ ಈ ಭಾಗಗಳಲ್ಲಿ ಮಂಜಿನ ಜೊತೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 22) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಭೀಕರ ಚಳಿ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ನಗರದಲ್ಲಿ ಚಳಿಯ ಪ್ರಮಾಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯದಲ್ಲಿ ಇಂದು (ಜನವರಿ 22) ಬಹುತೇಕ ಭಾಗಗಳಲ್ಲಿ ಒಣಹವೆ ಇರಲಿದ್ದು, ಭೀಕರ ಚಳಿ ಮಂದುವರೆಯಲಿದೆ. ಕರಾವಳಿಯಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಅಗಿಲ್ಲ. ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವೆಡೆ ಕನಿಷ್ಥ ತಾಪಮಾನ ಇಳಿಕೆ ಆಗಿದ್ದು, ರಾತ್ರಿ ಮತ್ತು ಮುಂಜಾನೆ ವೇಳೆ ಚಳಿಯ ಪ್ರಮಾಣ ಹೆಚ್ಚಿರಲಿದೆ. ಕೆಲವು ಭಾಗಗಳಲ್ಲಿ ಮುಂಜಾನೆ ಮಂಜು ಹೆಚ್ಚಿರಲಿದೆ ಎಂದು ತಿಳಿಸಿದೆ.
ರಾಜ್ಯದ ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿದ್ದು, ಚಳಿಯ ಪ್ರಮಾಣ ಮತ್ತಚ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಬದಲಾಗಿ ಒಣಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೂ ಈ ಭಾಗದಲ್ಲಿ ಹಲವೆಡೆ ಜನವರಿ 27ರ ವರೆಗೆ ಮಂಜು ಕವಿದ ವಾತಾವರಣ ಸಾಧ್ಯತೆಯಿದೆ. ಬೀದರ್, ಬಾಗಲಕೋಟೆ, ಬಾದಾಮಿ, ಧಾರವಾಡ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಶಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆ ಇದ್ದು, ಚಳಿಯ ಪ್ರಮಾಣ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಡಿಕೇರಿ, ಮಂಡ್ಯ, ಚಿಕ್ಕಮಗಳೂರು ಭಾಗಗಳಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಶಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆ ಇದ್ದು, ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಮುನ್ಸೂಚನೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕನಿಷ್ಠ ತಾಪಮಾನ ಇಳಿಕೆಯಾಗಿದ್ದು, ರಾತ್ರಿ ವೇಳೆ ಚಳಿ ಹೆಚ್ಚಿರಲಿದೆ. ಒಳನಾಡಲ್ಲಿ ವಿಶೇಷವಾಗಿ ಜಲಾಶಯಗಳಿರುವ ಭಾಗಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದೆ.












Click it and Unblock the Notifications