Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭೀಕರ ಚಳಿ ಮಂದುವರೆಯುವ ಮುನ್ಸೂಚನೆ: ಎಲ್ಲೆಲ್ಲಿ ತಿಳಿಯಿರಿ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಬೆಳಗ್ಗೆ ಹಾಗೂ ಸಂಜೆ ವೇಳೆ ಭೀಕರ ಚಳಿ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಶೀತದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 23) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಭೀಕರ ಚಳಿ ಮುಂದುವರೆದಿತ್ತು. ಮಧ್ಯಾಹ್ನದ ವೇಳಗೆ ಬಿಸಿಲಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಸಂಜೆ ಆಗುತ್ತಿದ್ದಂತೆ ಮತ್ತೆ ಶೀತ ಗಾಳಿ ಮುಂದುವರೆಯಲಿದೆ. ಹೀಗೆ ಮುಂದಿನ ಹಲವು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಿರಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Weather Heavy Cold Wave for Next 5 Days in These Districts of State from January 23

ರಾಜ್ಯದ ಬಹುತೇಕ ಭಾಗಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಕಳೆದ ಹಲವು ದಿನಗಳಿಂದಲೂ ಚಳಿ ಪ್ರಮಾಣ ದಿನದಿದಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಜನವರಿ 27ರ ವರೆಗೆ ರಾಜ್ಯದಲ್ಲಿ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ 9 ಗಂಟೆಯಾದರೂ ಮಂಜು ಮುಸುಕಿದ ವಾತಾವರಣ ಜೊತೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಪರಿಣಾಮ ಜನರು ಈ ಸಮಯದಲ್ಲಿ ಮನೆಯಿಂದ ಹೊರಬರಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಹಲವೆಡೆ ಮಳೆರಾಯ ಅಬ್ಬರಿಸಿದ್ದ. ಆದರೆ ಇದೀಗ ಮತ್ತೆ ಚಳಿಯ ವಾತಾವರಣ ಮುಂದುವರಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆ ಸಮಯದಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು, ಜನರು ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಒಳನಾಡಿನ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಳಾಗಿಲ್ಲ. ಆದರೆ ಜನವರಿ 28ರವರೆಗೆ ಕೆಲವೆಡೆ ದಟ್ಟ ಮಂಜು ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಯಾದಗಿರಿ, ಧಾರಾವಾಡ, ವಿಜಯಪುರ, ಹಾವೇರಿ ಸೇರಿದಂತೆ ಇನ್ನೂ ಕೆಲ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗಲಿದೆ. ಬೀದರ್‌ನಲ್ಲಿ ಕನಿಷ್ಠ ತಾಪಮಾನ ಕುಸಿದಿದ್ದು, ಉಳಿದ ಜಿಲ್ಲೆಗಳಿಗಿಂತ ಚಳಿ ಹೆಚ್ಚಿರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ಚಳಿಯ ಪ್ರಮಾಣ ಹೆಚ್ಚಾಗಿದೆ. ಚಿಕ್ಕಮಗಳೂರು, ಹಾಸನ, ಶಿಮಮೊಗ್ಗ, ಮಡಿಕೇರಿ, ಚಾಮರಾಜನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದ್ದು, ಮುಂದಿನ ಹಲವು ದಿನಗಳ ಕಾಲ ಈ ಭಾಗಗಳಲ್ಲಿ ಜನವರಿ ಅಂತ್ಯದವರೆಗೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈಗಾಗಲೇ 2024ರಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇನ್ನು ಈ ವರ್ಷ ಅಂದರೆ 2025ರಲ್ಲಿ ಮುಂಗಾರು ಮತ್ತೆ ಆರ್ಭಟಿಸುವ ಸಾಧ್ಯತೆ ಹೆಚ್ಚಿದೆ. ಇದೀಗ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಮುಂದಿನ ಹಲವು ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+