Karnataka Cold Wave: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭೀಕರ ಚಳಿ ಮುಂದುವರೆಯುವ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ರಾಜ್ಯ ರಾಜಧಾನಿ ಸೇರಿದಂತೆ ಈ ಭಾಗಗಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕೆಲವೇ ಕಲವು ಭಾಗಗಳಲ್ಲಿ ಮಾತ್ರ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 25) ಬೆಳಗ್ಗೆ ದಟ್ಟ ಮಂಜು, ಚಳಿಯ ನಡುವೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ಕ್ರಮೇಣ ಕಡಿಮೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ ಮುಂದಿನ 5 ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿಯ ಪ್ರಮಾಣ ಹೆಚ್ಚಿರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಈ ನಡುವೆಯೇ ಕೆಲವೇ ಭಾಗಗಳಲ್ಲಿ ತುಂತು ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮುಂದಿನ ವಾರ ಒಂದು ದಿನ ರಾಜ್ಯದ ಕಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಕಳೆದ ವಾರ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿವರೆಗೂ ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆಯು ಸಾಧ್ಯತೆಯಿದೆ ಅಂತಲೂ ತಿಳಿಸಿದೆ. ಇನ್ನು ಈಗಾಗಲೇ 2024ರಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇನ್ನು ಈ ವರ್ಷ ಅಂದರೆ 2025ರಲ್ಲಿ ಮುಂಗಾರು ಮತ್ತೆ ಆರ್ಭಟಿಸುವ ಸಾಧ್ಯತೆ ಹೆಚ್ಚಿದೆ. ಇದೀಗ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಮುಂದಿನ ಹಲವು ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಚಳಿಯ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications