Karnataka Cold Wave: ರಾಜ್ಯದ ಈ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ
Karnataka Cold Wave: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ರಾತ್ರಿ ವೇಳೆಗೆ ಭೀಕರ ಚಳಿ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಮಂಜಿನ ಜೊತೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಚಳಿ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಲೂರಿನಲ್ಲಿ ಇಂದು (ಜನವರಿ 26) ಬೆಳಗ್ಗೆ ಭೀಕರ ಚಳಿ ಇದ್ದು, 10 ಗಂಟೆ ಮೇಲೆ ಬಿಸಿಲಿನ ವಾತಾವರಣ ಮುಂದುವರೆದಿದೆ. ರಾತ್ರಿ ಮತ್ತೆ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉಳಿದ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿ ಅಂತಲೂ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭೀಕರ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಬೆಳಗ್ಗೆ ಮತ್ತು ಸಂಜೆ ವೇಳೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಕಳೆದ ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಲೇ ಇದೆ. ಧಾರವಾಡದಲ್ಲಿ 11.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲಗಳಲ್ಲಿ ಮುಂದಿನ 5 ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಳ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನಿನ್ನೆ (ಜನವರಿ 25) ಬೆಂಗಳೂರಿನ ಎಚ್ಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಗಾಗಲೇ 2024ರಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇನ್ನು ಈ ವರ್ಷ ಅಂದರೆ 2025ರಲ್ಲಿ ಮುಂಗಾರು ಮತ್ತೆ ಆರ್ಭಟಿಸುವ ಸಾಧ್ಯತೆ ಹೆಚ್ಚಿದೆ. ಇದೀಗ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಮುಂದಿನ ಹಲವು ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಚಳಿಯ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications