Karnataka Cold Wave: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭೀಕರ ಚಳಿ ಮುಂದುವರೆಯುವ ಮುನ್ಸೂಚನೆ
Karnataka Cold Wave: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ರಾಜ್ಯ ರಾಜಧಾನಿ ಸೇರಿದಂತೆ ಈ ಭಾಗಗಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲಲ್ಲಿ ಹೆಚ್ಚು ಶೀತ ಇರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 24) ಬೆಳಗ್ಗೆ ದಟ್ಟ ಮಂಜು, ಚಳಿಯ ನಡುವೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಹಾಗೆಯೇ ಮುಂದಿನ ಹಲವು ದಿನಗಳಲ್ಲಿ ನಗರದಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ ಒಂದು ವಾರ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದೆ, ಇದೇವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿಯ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿನ್ನೆ ಅಂದರೆ ಜನವರಿ 23ರಂದು ವಿಜಯಪುರ ಮತ್ತು ಬೀದರ್‌ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಈಗಾಗಲೇ 2024ರಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇನ್ನು ಈ ವರ್ಷ ಅಂದರೆ 2025ರಲ್ಲಿ ಮುಂಗಾರು ಮತ್ತೆ ಆರ್ಭಟಿಸುವ ಸಾಧ್ಯತೆ ಹೆಚ್ಚಿದೆ. ಇದೀಗ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಮುಂದಿನ ಹಲವು ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಚಳಿಯ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications