Heavy Rain Alert: ಏಪ್ರಿಲ್ 15ರವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಭರ್ಜರಿ ಮಳೆ ಮುನ್ಸೂಚನೆ

ಯುಗಾದಿ ಹಬ್ಬದ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಏಪ್ರಿಲ್ 9 ರಿಂದ ಏಪ್ರಿಲ್ 15 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೂಚನೆ ಕೊಟ್ಟಿದೆ.

ಕೊಡಗು, ಚಿಕ್ಕಮಗಳೂರು, ದಾವಣಗೆರೆ ಜಿಲ್ಲಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೂಡ ಏಪ್ರಿಲ್ 9ರಂದು ಮಳೆಯಾಗುವ ಸಾದ್ಯತೆ ಇದೆ.

Karnataka Weather Heavy Rain Alert Issued for These Districts Until April 15th

ಏಪ್ರಿಲ್ 15ರವರೆಗೆ ಮಳೆ ವಿವರ

ಏಪ್ರಿಲ್ 9 ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಿದೆ.

ಏಪ್ರಿಲ್ 10 ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೆರಡು ಕಡೆಗಳಲ್ಲಿ ಚದುರಿದಂತೆ ಲಘು ಮಳೆಯಾಗುವ ಸಾಧ್ಯತೆ ಇದ್ದು ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಏಪ್ರಿಲ್ 11 ರಂದು ಬೀದರ್, ಕಲಬುರ್ಗಿ, ವಿಜಯಪುರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಏಪ್ರಿಲ್ 12ರಂದು ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 13ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 14 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 15ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ವಿಜಯಪುರ, ಕಲಬುರ್ಗಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬಿರು ಬೇಸಿಗೆಯಿಂದ ಇಡೀ ರಾಜ್ಯದ ಜನ ಈಗಾಗಲೇ ಹೈರಾಣಾಗಿದ್ದಾರೆ. ಸದ್ಯ ಮಳೆಯಾದರೆ ಸಾಕು ಎನ್ನುವ ಪರಿಸ್ಥಿತಿ ಇದೆ. ಹವಾಮಾನ ಇಲಾಖೆ ಕೊಟ್ಟಿರುವ ಮುನ್ಸೂಚನೆಯಂತೆ ಮಳೆಯಾದರೆ ರಾಜ್ಯದ ಜನ ನೆಮ್ಮದಿಯ ನಿಟ್ಟುಸಿರು ಬಿಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+