Karnataka Weather: ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಈ ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕೊಂಚ ಇಳಿಕೆಯಾಗಿದ್ದ ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಇಂದು, ಆಗಸ್ಟ್ 20ರಂದು ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮಲೆನಾಡು ಭಾಗದಲ್ಲೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ
ರಾಜ್ಯಾದ್ಯಂತ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಇಂದು ಕೂಡ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾದಾರಣ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ದಿನವಿಡೀ ಆಗಾಗ್ಗೆ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲೂ ಉತ್ತಮ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ನದಿ, ಹಳ್ಳ-ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತಗ್ಗು ಪ್ರದೇಶಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲೂ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಇನ್ನೂ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಳೆಗಾಲ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ. ಜ್ವರ, ಶೀತ ಸೇರಿದಂತೆ ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಇನ್ನು ಹೆಚ್ಚಿನ ನೀರು ಹರಿಯುವ ನದಿ, ಹಳ್ಳ ಹಾಗೂ ತಗ್ಗು ಪ್ರದೇಶಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಕರಾವಳಿ ಭಾಗಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿಗಳ ಬಳಿ ತೆರಳದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


Click it and Unblock the Notifications
