Karnataka Rain: ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದ್ದು, ಮುಂದಿನ ಮೂರು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಭಾರಿ ಅಲೆಗಳು ಏಳಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರಿ ಮಳೆ, ಬಿರುಗಾಳಿ ಇರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದ ತೀರಕ್ಕೆ ತೆರಳದಂತೆ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಸೂಚನೆ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ದೊಡ್ಮನೆ ಎನ್ನುವಲ್ಲಿ ಕಳೆದ 24 ಗಂಟೆಯಲ್ಲಿ 163 ಮಿಮೀ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ಸುಲಗೋಡು ಎನ್ನುವಲ್ಲಿ ಕೂಡ 163 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಳಿದಂತೆ ಶಿವಮೊಗ್ಗ ಜಿಲ್ಲೆಯ ನಗರ, ತ್ರಿಣಿವೆ, ಹೊಸಹಳ್ಳಿ, ಕಂಡಿಕಾ, ಬಿದರಗೋಡು, ತೀರ್ಥಮತ್ತೂರು, ಹೊನ್ನೆತಾಲು, ಉತ್ತರ ಕನ್ನಡ ಜಿಲ್ಲೆಯ ದೊಡ್ಮನೆ, ರಾಮನಗರ, ಹಲಗೇರಿ, ಕದ್ರ, ಬೆಳಗಾವಿ ಜಿಲ್ಲೆಯ ಅಮಟೆ, ಮೊಹಿಸೆಟ್, ನೆರಸೆ, ಕಸಬ ನಂದಗಡ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ
ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೀದರ್ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕಲಬುರಗಿ, ವಿಜಯಪುರ, ಯಾದಗಿರಿ ರಾಯಚೂರು, ಗದಗ, ಧಾರವಾಡ, ಹಾವೇರಿ, ದಾವಣೆಗೆರೆ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರ, ರಾಯಚೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications