Karnataka Monsoon: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಐಎಂಡಿ ಮುನ್ಸೂಚನೆ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕು ಪಡೆದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಎರಡು ದಿನ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜುಲೈ 18) ಮೋಡ ಕವಿದ ವಾತಾವರಣ ಇದ್ದು, ಹಲವೆಡೆ ಮಳೆ ಮುಂದುವರೆದಿದೆ. ಈಗಾಗಲೇ ಶುಕ್ರವಾರ ನಗರದಲ್ಲಿ ವರುಣ ಆರ್ಭಟಿಸಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಮುಂದಿನ ಎರಡು ದಿನ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Heavy Rain Forecast in These Districts For Next two Days including bengaluru

ಬೆಂಗಳೂರಿನ ಹವಾಮಾನದ ವಿವರ

ಬೆಂಗಳೂರಿನಲ್ಲಿ ಇಂದು (ಜುಲೈ 18) ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೇ ನಗರದಲ್ಲಿಂದು ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನು ಕೆಲವೆಡೆ ಮೋಡ ಕವಿದ ವಾತಾವರಣ ಇದ್ದು, ಒಣಹವೆ ಮುಂದುವರೆದಿದೆ. ಮುಂದಿನ ಎರಡು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಎರಡು ದಿನ ಭಾರಿ ಮಳೆ ಮುನ್ಸೂಚನೆ

ಜುಲೈ 18ರಿಂದ 20ರ ವರೆಗೆ ರಾಜ್ಯ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಮನಗರ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿಡೆದೆ ಒಣಹವೆ ವಾತಾವರಣವೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಕೆಲವು ದಿನಗಳ ಹಿಂದೆ ಸುರಿದಿದ್ದ ಭಾರಿ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿತ್ತು. ಆದರೆ ಬಳಿಕ ಮತ್ತೆ ತಾಪಮಾನದ ಪ್ರಮಾಣ ಹೆಚ್ಚಾಗಿದ್ದು, ಕೆಲವು ಪ್ರಮುಖ ಡ್ಯಾಂಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಲಿತ್ತು. ಇದೀಗ ಮತ್ತೆ ಹಲವೆಡೆ ಮುಂಗಾರು ಚುರುಕು ಪಡೆದಿದ್ದು, ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ.

ಮಳೆ ಕೊರತೆಗೆ ಪ್ರಮುಖ ಕಾರಣ ಇಲ್ಲಿದೆ ನೋಡಿ

ರಾಜ್ಯದಲ್ಲಿ ಈ ಬಾರಿ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಮಳೆಯ ಪ್ರಮಾಣ ಭಾರಿ ಕುಸಿತ ಕಂಡಿದೆ. ಈ ನಡುವೆಯೇ ಇತ್ತೀಚೆಗಷ್ಟೇ ಹವಾಮಾನ ಇಲಾಖೆ ಆತಂಕದ ವಿಚಾರ ಹೊರಹಾಕಿದ್ದು, ಎಲ್‌ ನಿನೊ ಎಫೆಕ್ಟ್‌ನಿಂದ ಮುಂಗಾರು ಮತ್ತಷ್ಟು ಕ್ಷೀಣಿಸಲಿದೆ ಎಂದು ಮುನ್ಸೂಚನೆ ನೀಡಿತ್ತು. ಈ ನಡುವೆಯೇ ಇದೀಗ ಹಲವೆಡೆ ಮಳೆ ಚುರುಕು ಪಡೆದಿದ್ದು, ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ.

ಹೇಳಬೇಕಂದ್ರೆ ಇಷ್ಟೊತ್ತಿಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಬೇಕಿತ್ತು. ಆದರೆ ವಾಡಿಕೆಯಷ್ಟು ಕೂಡ ಮಳೆ ಸುರಿದಿಲ್ಲ. ಇನ್ನೂ ಮಳೆರಾಯನ ಆರ್ಭಟ ಮತ್ತೆ ಯಾವಾಗ ಶುರುವಾಗಲಿದೆಯೋ ಎಂದು ರಾಜ್ಯದ ರೈತರು ಹಾಗೂ ಜನ ಮೋಡದ ಕಡೆ ಮುಖ ಮಾಡಿ ನೋಡುವಂತಾಗಿತ್ತು. ಈ ಸಂದರ್ಭದಲ್ಲೇ ಕೆಲವೆಡೆ ಈಗ ಮತ್ತೆ ಸಾಧಾರಣ ಮಳೆ ಮುಂದುವರೆದಿದೆ. ಇದರಿಂದ ಆತಂಕದಲ್ಲಿದ್ದ ರೈತರು, ಜನರು ಸಂತಸಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+