Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Weather: ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ತಂಪರೆಯುತ್ತಲೇ ಬಂದಿದ್ದಾನೆ. ಇನ್ನು ಹಲವೆಡೆ ಆಗಾಗಾ ಮಾತ್ರ ಜಿನುಗು ಮಳೆಯಾಗುತ್ತಿದೆ ಅಷ್ಟೇ ಹೊರತುಪಡಿಸಿದ್ರೆ, ಉಳಿದ ಭಾಗಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರ ನಡುವೆಯೂ ಹಲವು ಜಿಲ್ಲೆಗಳಲ್ಲಿ ಇಂದು (ಮೇ 12) ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ವರುಣ ಆರ್ಭಟಿಸಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗೆಯೇ ಇಂದು (ಮೇ 12) ಬೆಳಗ್ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Weather Heavy rain forecast in these districts on May 12 2024

ಎಲ್ಲೆಲ್ಲಿ ಮಳೆಯಾಗಿದೆ?: ಈಗಾಗಲೇ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ಗುಡುಗು ಸಹಿತ ಮಳೆಯಾಗಿದೆ.

ಇಂದು ಎಲ್ಲೆಲ್ಲಿ ಭಾರೀ ಮಳೆ?: ಇನ್ನು ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗ ಸಾಧ್ಯತೆ. ಅದರಲ್ಲೂ ದಕ್ಷಿಣ ಕರಾವಳಿ ಕರ್ನಾಟಕದಲ್ಲಿ ಇಂದು ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+