Karnataka Weather: ಕರ್ನಾಟಕದ ಈ ಭಾಗದಲ್ಲಿ ಇನ್ನೊಂದು ವಾರ ಭಾರೀ ಮಳೆ, ಶೀತಗಾಳಿ ಎಚ್ಚರಿಕೆ!
Karnataka Weather: ಕರ್ನಾಟಕದ ವಿವಿಧ ಭಾಗದಲ್ಲಿ ಕಳೆದ ಒಂದು ವಾರದಿಂದ ಮಳೆ ಇಳಿಕೆಯಾಗಿತ್ತು. ಇದೀಗ ನವೆಂಬರ್ 16ರಿಂದ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಅಲ್ಲದೇ ಇದರೊಂದಿಗೆ ರಾಜ್ಯದ ವಿವಿಧ ಭಾಗದಲ್ಲಿ ಚಳಿ ಪ್ರಮಾಣವೂ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಹಾಗೂ ಈ ವಾರ ಕರ್ನಾಟಕದ ಹವಾಮಾನವು ಯಾವ ರೀತಿ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ನವೆಂಬರ್ 22ರ ವರೆಗೆ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ದಕ್ಷಿಣ ಶ್ರೀಲಂಕಾ ಹಾಗೂ ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮೇಲಿನ ವಾಯು ಚಂಡಮಾರುತ ಪ್ರಭಾವದ ಅಡಿಯಲ್ಲಿ ನವೆಂಬರ್ 15ರಂದು ಶ್ರೀಲಂಕಾದ ಕರಾವಳಿಯ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಂಡಿದೆ.

ಈ ವಾಯು ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದ್ದು, ಮುಂದಿನ 24 ಗಂಟೆಯ ಅವಧಿಯಲ್ಲಿ ನಿಧಾನವಾಗಿ ಪಶ್ಚಿಮ - ಉತ್ತರ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆ ಇದೆ. ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲಲಿ ಚಂಡಮಾರುತದ ಪರಿಚಲನೆ ಇರಲಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.
ತಾಪಮಾನದ ಎಚ್ಚರಿಕೆ: ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಇದರೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳ ವರೆಗೆ ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ ಹಾಗೂ ಬಾಲಕೋಟೆ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ವರೆಗೆ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?
ಇನ್ನು ಬೆಂಗಳೂರಿನಲ್ಲಿ ಮುಂದಿನ ವಾರದಿಂದ ಮಳೆ ಆರ್ಭಟ ಜೋರಾಗಲಿದೆ. ಬಹುತೇಕ ಮೋಡ ಕವಿದ ಆಕಾಶ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇರುತ್ತದೆ. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಮುಂದಿನ ವಾರದಿಂದ ಕರ್ನಾಟಕದಲ್ಲಿ ಭಾರೀ ಮಳೆ
ಇನ್ನು ಮೂರು ದಿನಗಳಲ್ಲಿ ರಾಜ್ಯದಲ್ಲಿ ಮಳೆ ತೀವ್ರತೆ ಹೆಚ್ಚಳವಾಗಲಿದೆ. ಅಲ್ಲಿಯ ವರೆಗೆ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ ಎಂದು ಹೇಳಲಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ನವೆಂಬರ್ 18ರಿಂದ ನವೆಂಬರ್ 21ರ ವರೆಗೆ ಮಳೆ ಆಗಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ.
ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ನವೆಂಬರ್ 17ರಿಂದ ದಕ್ಷಿಣ ಕರ್ನಾಟಕದ ವಿವಿಧ ಭಾಗದಲ್ಲೂ ಧಾರಾಕಾರ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅಲ್ಲದೇ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications